ರಾಜ್ಯ

ಪ್ರವಾಹ ಪೀಡಿತ ಯಾದಗಿರಿ ಜಿಲ್ಲೆಗೆ ಸಿಎಂ ಭೇಟಿ: ಪರಿಸ್ಥಿತಿ ಪರಿಶೀಲನೆ

Manjula VN

ಯಾದಗಿರಿ: ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಯಾದಗಿರಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಭೇಟಿ ನೀಡಿದ್ದು, ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. 

ಯಾದಗಿರಿ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿಗಳು ತಿಂಥಣಿ, ಶೊರಾಪುರ ತಾಲೂಕಿನ ದೇವಪುರ ಗ್ರಾಮ, ಶಹಪುರ ತಾಲೂಕಿನ ಕೊಲ್ಲೂರು ಸೇತುವೆ, ಗೊಡೂರು, ಯಕ್ಷಂತಿ ಮತ್ತು ಇನ್ನಿತರೆ ಗ್ರಾಮಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. 

ಯಕ್ಷಂತಿ ಗ್ರಾಮಕ್ಕೆ ಸಿಎಂ ಭೇಟಿ ನೀಡಿದರೂ ಊರಿನ ಗ್ರಾಮಸ್ಥರು ಯಡಿಯೂರಪ್ಪ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಿದರು. 

ಯಾದಗಿರಿಗೆ ಭೇಟಿ ನೀಡುತ್ತಿದ್ದಂತೆಯೇ ಯಡಿಯೂರಪ್ಪ ಅವರನ್ನು ಜೆಡಿಎಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸ್ವಾಗತಿಸಿದರು. ಈ ವೇಳೆ ಪ್ರತಿಭಟನಾನಿರತ ಕೆಲ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿದರು. 

ಯಾದಗಿರಿಗೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪ್ರವಾಹ ಪರಿಸ್ಥಿತಿ ಕುರಿತಂತೆ ಈವರೆಗೂ ತೆಗೆದುಕೊಳ್ಳಲಾದ ನಿರ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಪರಿಶೀಲನೆ ನಡೆಸಿದರು. 

SCROLL FOR NEXT