ಶಸ್ತ್ರಾಸ್ತ್ರಗಳಿಗೆ ಯಧುವೀರ್ ಪೂಜೆ 
ರಾಜ್ಯ

ನಾಡಿನಾದ್ಯಂತ ಸಡಗರ,ಸಂಭ್ರಮದಿಂದ ಆಯುಧ ಪೂಜೆ ಆಚರಣೆ

:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ  ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ

ಬೆಂಗಳೂರು:ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ  ಆಯುಧ ಪೂಜೆ ಹಾಗೂ ಸರಸ್ವತಿ ಪೂಜೆ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಮೈಸೂರಿನ ಅರಮನೆ ಮೈದಾನದೊಳದೆ ರಾಜಮನೆತನದಿಂದ ಆಯಧ ಪೂಜೆಯನ್ನು ಆಚರಿಸಲಾಗುತ್ತಿದೆ. 

ಆಯುಧ ಪೂಜೆಗೆ ಐತಿಹಾಸಿಕ ದಂತಕಥೆವಿದೆ. ದುರ್ಗಾ ದೇವಿಯು ಚಾಮುಂಡೇಶ್ವರಿಯ ರೂಪ ತಾಳಿ ಮಹಿಷಾಸುರನನ್ನು ಸಂಹರಿಸಿದ ಸಂದರ್ಭದಲ್ಲಿ ದೇವಿ ಉಪಯೋಗಿಸಿದ ಆಯುಧಗಳನ್ನು ಮತ್ತೆ ಬಳಸದೆ ಬಿಸಾಡಿದಳು. ಆ ಆಯುಧಗಳನ್ನು ನಂತರ ಪೂಜೆಸಲಾಯಿತು. ಹಾಗಾಗಿಯೇ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ ಎಂಬ ಕಥೆ ಪುರಾಣಗಳಲ್ಲಿ ಉಲ್ಲೇಖವಾಗಿದೆ. 

ಆಯುಧ ಪೂಜೆಯ ಹಿಂದೆ ಪೌರಾಣಿಕ ಮಹತ್ವವಿದೆ. ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ, ಅಜ್ಞಾತವಾಸದ ಸಮಯದಲ್ಲಿ ಬನ್ನಿಗಿಡದಲ್ಲಿ ಬಚ್ಚಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನೆಲ್ಲ ತೆಗೆದು  ಶತ್ರುಗಳ ವಿರುದ್ಧ ಪಾಂಡವರು ವಿಜಯವನ್ನು ಸಾಧಿಸುತ್ತಾರೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಸಾಧಿಸಿದ ವಿಜಯದ ಕುರುಹಾಗಿ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT