ರಾಜ್ಯ

ತೀರ್ಥೋದ್ಭವ ಜಾತ್ರೆ: ತಲಕಾವೇರಿಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ

Manjula VN

ಮಡಿಕೇರಿ: ತಲಕಾವೇರಿ, ಭಾಗಮಂಡಲದ ದೇಗುಲಗಳ ವ್ಯಾಪ್ತಿಯಲ್ಲಿ ನೀರಿನ ಬಾಟಲಿ, ಕ್ಯಾನ್ ಗಳು ಸೇರಿದಂತೆ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ನಿಷೇಧ ಹೇರಲಾಗಿದೆ. 

ಕೊಡಗಿನ ಭಾಗಮಂಡಲ ಮತ್ತು ಕಾವೇರಿ ದೇಗುಲಗಳ ಬಳಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಲಕಾವೇರಿ ತೀರ್ಥೋದ್ಭವ ಜಾತ್ರೆ ಸಂಬಂಧ ಭಾಗಮಂಡಲದ ಮಡಿ ಕಟ್ಟಡದಲ್ಲಿ ಶನಿವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಶಾಸಕ ಕೆ,ಜಿ.ಬೋಪಯ್ಯ ಅವರು, ಕಾವೇರಿ ತೀರ್ಥೋದ್ಭವ ಸಂದರ್ಭದಲ್ಲಿ ಕೊಳದಿಂದ ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲಿಗಳಿಂದ ತೀರ್ಥವನ್ನು ಶೇಖರಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದ್ದು, ಇದನ್ನು ತಪ್ಪದೆ ಪಾಲನೆ ಮಾಡಬೇಕೆಂದಗು ಸೂಚಿಸಿದ್ದಾರೆ. 

ದೇವಸ್ಥಾನ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. 

SCROLL FOR NEXT