ರಮೇಶ್ ಕುಮಾರ್ 
ರಾಜ್ಯ

ಮಡಿವಂತಿಕೆ ಅಲ್ಲದ ಜನಪರ ಆರ್ಥಿಕತೆ ಬೇಕಾಗಿದೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ 

ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ. 

ಬೆಂಗಳೂರು: ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ. 

'ಪವಿತ್ರ ಆರ್ಥಿಕತೆಗಾಗಿ' ಪ್ರಸನ್ನ ಅವರು ಕೈಗೊಂಡ  ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಆರ್ಥಿಕ ಕ್ಷೇತ್ರದಲ್ಲಿ ಪಾವಿತ್ರ್ಯತೆ ಬೇಕು. ಹಾಗಂತ ಅದು ಮತ್ತೆ ಮಡಿವಂತಿಕೆ ಆಗಬಾರದು, ಜನಪರ ಆರ್ಥಿಕತೆ ಆಗಬೇಕಾಗಿದೆ. ಉತ್ಪಾದಕರು ಮತ್ತು ಬಳಕೆದಾರರ ನಡುವಿನ ಅಂತರ ಕಡಿಮೆ ಆಗಬೇಕು. ಮಧ್ಯವರ್ತಿಗಳ ಹಾವಳಿ ಇಲ್ಲದ ಹಾಗೇ ಇದನ್ನು ಮೇಲೆತ್ತಬೇಕು. ತಾವಂತೂ ಈ ಚಳವಳಿಗೆ ಕಾಯಾ ವಾಚಾ ಮನಸಾ ಜೊತೆಗಿದ್ದೇನೆ ಎಂದರು.

ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಗೋಪಾಲ ಗೌಡ ಮಾತನಾಡಿ, 'ಮಾನವಹಕ್ಕುಗಳು ಮತ್ತು ಮನುಷ್ಯರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಎರಡೂ ಸರಕಾರಗಳು ಸೋತಿವೆ. ಬಡತನ, ನಿರುದ್ಯೋಗ, ಅನಾರೋಗ್ಯ, ಪರಿಸರ ಹಾನಿ, ಸಂಪೂರ್ಣ ಕೆಳಗಿಳಿದ ದೇಶದ ಜಿಡಿಪಿ, ರೈತರ ಸರಣಿ ಆತ್ಮಹತ್ಯೆಗಳು, ಪ್ರಕೃತಿ ವಿಕೋಪಕ್ಕೊಳಗಾದ ಜಿಲ್ಲೆ ಹಾಗೂ ಜನರಿಗೆ ಇನ್ನೂ ತಲುಪದ ಪರಿಹಾರ ದಾರಿಗಳು ಇದೆಲ್ಲವನ್ನು ಗಮನದಲ್ಲಿರಿಸಿಕೊಂಡು ಸರಕಾರಗಳು ಕಾರ್ಯನಿರ್ವಹಿಸಬೇಕು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!