ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ, ಯುವಕನ ಕೊಲೆ

ಉದ್ಯಾನವನದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಬೆಂಗಳೂರು: ಉದ್ಯಾನವನದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಪ್ರಣವ್ (28) ಹತ್ಯೆಗೀಡಾದವರು. ಮಂಗಳವಾರ ರಾತ್ರಿ 7.30ರ ವೇಳೆ ಮನೆಯಿಂದ ರಾಜಾಜಿನಗರದ ಕೈಗಾರಿಕಾ ಪ್ರದೇಶದ ಉದ್ಯಾನವನಕ್ಕೆ ಪ್ರಣವ್ ವಾಯುವಿಹಾರಕ್ಕೆ ತೆರಳಿದ್ದರು. ಅಲ್ಲಿ ದುಷ್ಕರ್ಮಿಗಳ ತಂಡ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಣವ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಕೊಲೆ ಮಾಡಿದವರು ಯಾರು, ಏಕಾಗಿ ಕೊಲೆಯಾಗಿದೆ ಎನ್ನುವುದು ಇನ್ನೂ ತಿಳಿದಿಲ್ಲ ಎಂದು ಪೋಲೀಸರು ಹೇಳಿದ್ದು ಘಟನೆ ಸಂಬಂಧ ಮಾಗಡಿರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ