ರಾಜ್ಯ

ಮಾನನಷ್ಟ ಮೊಕದ್ದಮೆ; ಶೋಭಾ ಕರಂದ್ಲಾಜೆಗೆ ಷರತ್ತುಬದ್ಧ ಜಾಮೀನು

Srinivasamurthy VN

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಬಾ ಕರಂದ್ಲಾಜೆ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪಿಎಫ್‌ಐ (ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ) ಸಂಘಟನೆ ವಿರುದ್ಧ ಮಾಡಲಾದ ಟೀಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆಗೆ ಜನಪ್ರತಿನಿಧಿಗಳ ನ್ಯಾಯಾಲಯ ರೂ 200 ದಂಡ ವಿಧಿಸಿ ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತಂತೆ ಶೋಭಾ ಅವರು ಗುರುವಾರ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರ ಮುಂದೆ ಖುದ್ದು ಹಾಜರಾದರು.

ಶೋಭಾ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ನ್ಯಾಯಾಲಯಕ್ಕೆ ರೂ 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ರೂ 10 ಸಾವಿರ ನಗದು ಭದ್ರತೆ ಒದಗಿಸಿ’ ಎಂದು ಆದೇಶಿಸಿದ ನ್ಯಾಯಾಧೀಶರು ದಂಡ ವಿಧಿಸಿ ಜಾಮೀನು ಮಂಜೂರು ಮಾಡಿದರು.

SCROLL FOR NEXT