ಪರಮೇಶ್ವರ್ 
ರಾಜ್ಯ

ಉಪಚುನಾವಣೆ ಸಮೀಪಿಸುತ್ತಿರುವಾಗಲೇ ಐಟಿ ದಾಳಿ: ಇದು ದ್ವೇಷ ರಾಜಕಾರಣ- ಕಾಂಗ್ರೆಸ್

ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದರೇ ಯಾರಿಗೂ ಸಮಸ್ಯೆ ಇಲ್ಲ, ಆದರೆ ಇದೊಂದು ನಾಟಕ, ನಾನು ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗಿದ್ದವನು, ಇದೊಂದು ರಾಜಕೀಯ ಪ್ರೇರಿತ ದಾಳಿ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಲು ಐಟಿ ದಾಳಿ ನಡೆಸಲಾಗಿದೆ ಎಂದು ಮಾಜಿ ಸಂಸದ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡುವಲ್ಲಿ ಐಟಿ ಬ್ಯುಸಿಯಾಗಿದೆ ನಾವು ದೇಶದ ಕಾನೂನು ಪಾಲಿಸುವ ನಾಗರಿಕರು,.ಉಪ ಚುನಾವಣೆಗೆ ಮೊದಲು ನಡೆಯುತ್ತಿರುವ ರಾಜಕೀಯ ಪಿತೂರಿ ಇದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ನಮ್ಮ ವರ್ಚಸ್ಸಿಗೆ ಧಕ್ಕೆ ತರಲು ಕೇವಲ ಕಾಂಗ್ರೆಸ್ ನಾಯಕರುಗಳನ್ನೆ ಟಾರ್ಗೆಟ್ ಮಾಡಲಾಗುತ್ತಿದೆ, ಇದೊಂದು ರೀತಿಯ ರಾಜಕೀಯ ಕಿರುಕುಳ ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಗುಜರಾತ್ ಶಾಸಕರುಗಳಿಗೆ ಆಶ್ರಯ ನೀಡಿದ್ದಕ್ಕೆ ಡಿಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆಯಿತು,  ಬಿಜೆಪಿ ಯವರು 5 ಕೋಟಿ ರು ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ವಿಧಾನಸಭೆಯಲ್ಲೇ ನೇರ ಆರೋಪ ಮಾಡಿದ್ದಾರೆ,ಅವರ ವಿರುದ್ಧ ಏಕೆ ಕ್ರಮ ಇಲ್ಲ, ಐಟಿ ಮತ್ತು ಇಡಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿಎಸ್ ಉಗ್ರಪ್ಪ ಪ್ರಶ್ನಿಸಿದ್ದಾರೆ,

ಐಟಿ ದಾಳಿಯ ಬಗ್ಗೆ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ, ಆದರೆ ಜೆಡಿಎಸ್ ಮಾತ್ರ ಮೌನಕ್ಕೆ ಶರಣಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT