ರಾಜ್ಯ

ಜಯಚಾಮರಾಜ ಒಡೆಯರ್ ಪ್ರಜಾಪ್ರಭುತ್ವವಾದಿಯಾಗಿದ್ದರು: ರಾಷ್ಟ್ರಪತಿ ಕೋವಿಂದ್

Manjula VN

ಮೈಸೂರು: ಪ್ರಜಾಪ್ರಭುತ್ವವಾದಿಯಾಗಿದ್ದ ಮೈಸೂರು ಅರಸರು ನಾಡಿಗೆ ನೀಡಿದ ಕೊಡುಗೆ ಅಪಾರ, ಅವರ ತತ್ಪಾದರ್ಶಗಳನ್ನು ಅಳವಡಿಸಿಕೊಳ್ಳುವುದೇ ನಾವು ಅವರಿಗೆ ನೀಡುವ ಗೌರವ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಅಭಿಪ್ರಾಯಪಟ್ಟಿದ್ದಾರೆ. 

ನಗರದ ಅರಮನೆಯ ದರ್ಬಾರ್ ಹಾಲ್'ನಲ್ಲಿ ಗುರುವಾರ ಸಂಜೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಆಯೋಡಿಸಿದ್ದ ಮೈಸೂರು ಸಂಸ್ಥಾನದ ಕೊನೆಯ ದೊರೆ ಶ್ರೀಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೂರದೃಷ್ಟಿ ಹೊಂದಿದ್ದ ಮೈಸೂರು ಅರಸರು, ಪ್ರಜಾಪ್ರಭುತ್ವಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅರಸೊತ್ತಿಗೆ ಇದ್ದರೂ ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಪ್ರಜಾಪ್ರಭುತ್ವದಲ್ಲಿ ತಮ್ಮ ಸಂಸ್ಥಾನವನ್ನು ವಿಲೀನಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ಪ್ರತಿನಿಧಿಗಳ ಸಭೆ ಕರೆದು ಈ ತೀರ್ಮಾನ ಕೈಗೊಳ್ಳುವ ಮೂಲಕ ತಾವೊಬ್ಬ ಪ್ರಜಾಪ್ರಭುತ್ವವಾದಿ ಎಂಬುದನ್ನು ಸಾಬೀತುಪಡಿಸಿದ್ದಾರೆಂದು ಕೊಂಡಾಡಿದ್ದಾರೆ. 

ಇದೇ ವನೇಳೆ ಮೈಸೂರು ವಿವಿಗೆ ಜಯಚಾಮರಾಜ ಒಡೆಯರ್ ಅವರು ನೀಡಿದ 22 ಎಕರೆ ಪ್ರದೇಶದಲ್ಲಿ ಮೈಸೂರು ವಿವಿ ನಿರ್ಮಿಸುತ್ತಿರುವ ಉನ್ನತ ಶಿಕ್ಷಣ ಸಂಸ್ಥೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶಿಲಾನ್ಯಾಸ ನೆರವೇರಿಸಿದರು. ಶ್ರೀವಿದ್ಯಾ ಸಂಕೀರ್ತನ ಸುಧಾಲಹರಿ ಗ್ರಂಥವನ್ನು ರಾಜ್ಯಪಾಲ ವಜುಭಾಯ್ ವಾಲಾ ಅವರು ಬಿಡುಗಡೆಗೊಳಿಸಿದರು. 

SCROLL FOR NEXT