ಡಾ.ಹರ್ಷವರ್ಧನ್ 
ರಾಜ್ಯ

ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್

ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಎನ್ ಡಿಎ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸಚಿವ ಡಾ ಹರ್ಷವರ್ಧನ್ ಅವರು ಹೇಳಿದ್ದಾರೆ.

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಎನ್ ಡಿಎ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸಚಿವ ಡಾ ಹರ್ಷವರ್ಧನ್ ಅವರು ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ತೆರಿಗೆ ಇಲಾಖೆಯು ಸ್ವಾಯತ್ತ ಸಂಸ್ಥೆಯಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅಥವಾ ಬೇರಾವುದೇ ರಾಜಕೀಯ ನಾಯಕರ ನಿವಾಸದ ಮೇಲೆ ದಾಳಿ ನಡೆಸುವ ಹಕ್ಕು ಹೊಂದಿದೆ ಎಂದು ಸ್ಪಷ್ಟಪಡಿಸಿದರು.

ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಪಾತ್ರ ಇದೆ. ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವುದು ಆಧಾರ ರಹಿತ ಎಂದು ಅವರು ಹೇಳಿದ್ದಾರೆ.

ಐಟಿ ಹಾಗೂ ಇನ್ನಿತರ ಸ್ವಾಯತ್ತ ಸಂಸ್ಥೆಗಳು ತಮ್ಮ ಕರ್ತವ್ಯ ನಿರ್ವಹಿಸುವಾಗ ಕೇಂದ್ರ ಸರ್ಕಾರ ಮೂಗು ತೂರಿಸುವುದಿಲ್ಲ. ಹೀಗಾಗಿ ವಿಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸುವುದೂ ಸಹ ಸಮಯ ವ್ಯರ್ಥ ಮಾಡಿದಂತೆ ಎಂದು ಹರ್ಷವರ್ಧನ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!