ಎಸ್ ಆರ್ ವಿಶ್ವನಾಥ್ 
ರಾಜ್ಯ

ಶಾಸಕ ಎಸ್.ಆರ್ ವಿಶ್ವನಾಥ್ ಸಹಿ ಪೋರ್ಜರಿ ಮಾಡಿ ಸಿಕ್ಕಿಬಿದ್ದ ಜಿಪಂ ಅಧಿಕಾರಿ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ಸಹಿಯನ್ನು ಫೋರ್ಜರಿ ಮಾಡಿ ಜಿಲ್ಲಾ ಪಂಚಾಯಿತಿ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ, ಇದರ ಜೊತೆಗೆ ಸಿಎಂ ಕಚೇರಿಯ ಭದ್ರತಾ ವೈಫಲ್ಯದ ಬಗ್ಗೆ ಬಹಿರಂಗಗೊಂಡಿದೆ.

ಬೆಂಗಳೂರು:  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ಸಹಿಯನ್ನು ಫೋರ್ಜರಿ ಮಾಡಿ ಜಿಲ್ಲಾ ಪಂಚಾಯಿತಿ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ, ಇದರ ಜೊತೆಗೆ ಸಿಎಂ ಕಚೇರಿಯ ಭದ್ರತಾ ವೈಫಲ್ಯದ ಬಗ್ಗೆ ಬಹಿರಂಗಗೊಂಡಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಬಿ.ಕೆ.ಚಂದ್ರಕಾಂತ್ ಸಿಕ್ಕಿಬಿದ್ದ ಅಧಿಕಾರಿ. ಚಂದ್ರಕಾಂತ್ ತಮ್ಮ ವರ್ಗಾವಣೆಗಾಗಿ ಈ ರೀತಿ ಮಾಡಿದ್ದಾರೆ. ಸೆಪ್ಟಂಬರ್ 8ರಂದು ಎಸ್.ಆರ್.ವಿಶ್ವನಾಥ್ ಅವರ ಹೆಸರಿನ ಲೆಟರ್ ಹೆಡ್ ಬಳಸಿ ಸಿಎಂ ಶಿಫಾರಸು ಪತ್ರವನ್ನು ಚಂದ್ರಕಾಂತ್ ತಲುಪಿಸಿದ್ದರು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾ ಅಧಿಕಾರಿ ವಿಠಲ್ ಕಾವಳೆ ಜಾಗಕ್ಕೆ ತಮ್ಮನ್ನು ವರ್ಗಾಯಿಸುವಂತೆ ಚಂದ್ರಕಾಂತ್ ಮನವಿ ಮಾಡಿದ್ದರು. ನಕಲಿ ಶಿಫಾರಸು ಪತ್ರಕ್ಕೆ ಸಹಿ ಮಾಡಿ ಸಿಎಂ ಕೂಡ ವರ್ಗಾವಣೆ ಆದೇಶ ಹೊರಡಿಸಿದ್ದರು. ಇದೀಗ ಫೋರ್ಜರಿ ಪ್ರಕರಣ ಬಯಲಾಗಿದ್ದು, ಆರೋಪಿ ಚಂದ್ರಕಾಂತ್ ವಿರುದ್ಧ ಪೊಲೀಸ್ ದೂರು ಕೊಡಲು ಎಸ್.ಆರ್.ವಿಶ್ವನಾಥ್ ಮುಂದಾಗಿದ್ದಾರೆ

ಚಂದ್ರಕಾಂತ್ ಬಿ.ಕೆ. ಸಹಾಯಕ ಕಾರ್ಯದರ್ಶಿಯಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ನನಗೆ ಪರಿಚಿತರಿರುತ್ತಾರೆ. ಇವರು ವಯೋವೃದ್ಧ ತಂದೆ-ತಾಯಿಯ ಆರೋಗ್ಯದ ಕಡೆ ಗಮನಿಸಬೇಕಾದ ಕಾರಣ ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಸಹಾಯಕ ಯೋಜನಾ ಅಧಿಕಾರಿ-1 ಆಗಿ ಕಾರ್ಯನಿರ್ವಹಿಸುತ್ತಿರವ ವಿಠಲ್ ಕಾವಳೆ ಜಾಗಕ್ಕೆ ತಮ್ಮನ್ನು ವರ್ಗಾಯಿಸುವಂತೆ ಸೂಕ್ತ ಆದೇಶ ನೀಡಬೇಕು ಎಂದು ಕೋರುತ್ತೇನೆ.

ಪತ್ರದ ಕೆಳಗೆ ತಮ್ಮ ವಿಶ್ವಾಸಿ ಎಸ್.ಆರ್.ವಿಶ್ವನಾಥ್ ಎಂದು ಬರೆದು ಅವರ ಸಹಿಯನ್ನು ಫೋರ್ಜರಿ ಮಾಡಿದ್ದಾರೆ. ಈ ಪತ್ರವನ್ನು ಚಂದ್ರಕಾಂತ್ ಬಿ.ಕೆ. ಸೆಪ್ಟೆಂಬರ್ 18ರಂದು ಸಿಎಂ ಯಡಿಯೂರಪ್ಪ ಅವರಿಗೆ ನೀಡಿದ್ದರು. ಇದಕ್ಕೆ ಸಿಎಂ ಅಕ್ಟೋಬರ್ 9ರಂದು ಸಹಿ ಮಾಡಿದ್ದರು.

ತಮ್ಮ ಕಚೇರಿಯಿಂದ ಲೆಟರ್ ಹೆಡ್ ಕಳ್ಳತನವಾಗಿರುದನ್ನು ಕಂಡ ವಿಶ್ವನಾಥ್ ಅಲ್ಲಿದ್ದ ಅಧಿಕಾರಿಗಳ ಮೇಲೆ ಕೂಗಾಡಿದ್ದಾರೆ, ನನಗೆ ಗೊತ್ತಿಲ್ಲದೇ ನನ್ನ ಲೆಟರ್ ಹೆಡ್ ಕದ್ದು ನನ್ನ ಸಹಿ ಫೋರ್ಜರಿ ಮಾಡಿದ್ದಾರೆ ಇನ್ನೂ ಸಿಎಂ ಸಹಿಯನ್ನು ನಕಲಿ ಮಾಡುವುದಿಲ್ಲ ಎಂಬುದನ್ನು ಹೇಗೆ ನಂಬುವುದು ಎಂದು ಪ್ರಶ್ನಿಸಿದ್ದಾರೆ, ಇನ್ನೂ ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

SCROLL FOR NEXT