104 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಭೂಪ!
ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಎಷ್ಟು ಬಾರಿ ಸಂಚಾರಿ ನಿಯಮ ಉಲ್ಲಂಘಿಸಬಹುದು? ಎರಡು-ಮೂರು ಬಾರಿ? ಆದರೆ, ಇಲ್ಲೋರ್ವ ವ್ಯಕ್ತಿ ಬರೋಬ್ಬರಿ 104 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ!
ಬೆಂಗಳೂರು: ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಎಷ್ಟು ಬಾರಿ ಸಂಚಾರಿ ನಿಯಮ ಉಲ್ಲಂಘಿಸಬಹುದು? ಎರಡು-ಮೂರು ಬಾರಿ? ಆದರೆ, ಇಲ್ಲೋರ್ವ ವ್ಯಕ್ತಿ ಬರೋಬ್ಬರಿ 104 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ!
ಸಂಚಾರ ನಿಯಮ ಉಲ್ಲಂಘಿಸುವವರಿಗೆ ವಿಧಿಸುವ ದಂಡದ ಮೊತ್ತ ಹೆಚ್ಚಳ ಮಾಡಿದ್ದ ಸರ್ಕಾರ, ಆ ದಂಡದ ಮೊತ್ತವನ್ನು ಈಗಾಗಲೇ ಇಳಿಕೆ ಮಾಡಿದೆ.
ಈ ಬೆಳವಣಿಗೆಯ ನಡುವೆ 104 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಮೊಹಮ್ಮದ್ ಶಬ್ಬೀರ್ ಎಂಬಾತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಹಲವು ತಿಂಗಳಲ್ಲಿ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನದಲ್ಲಿ ಓಡಾಡುತ್ತಿದ್ದ ಜಾಲಹಳ್ಳಿ ನಿವಾಸಿ ಶಬ್ಬೀರ್ 10 ಸಾವಿರ ರೂ. ದಂಡ ವಿಧಿಸಿರುವುದಾಗಿ ಜಾಲಹಳ್ಳಿ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.