ರಾಜ್ಯ

ಘನತ್ಯಾಜ್ಯ ನಿರ್ವಹಣೆ: ಬಿಬಿಎಂಪಿ ವಿರುದ್ಧ ಹೈಕೋರ್ಟ್ ಮತ್ತೆ ಗರಂ

Lingaraj Badiger

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾನಗಿ ಪಡೆಯದೆ ಘನತ್ಯಾಜ್ಯವನ್ನು ಸುರಿಯುತ್ತಿರುವ ಕುರಿತು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
  
ಬಿಬಿಎಂಪಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ. ಇದನ್ನು ತಡೆಯಲು ವಿಫಲವಾಗಿರುವ ಬಿಬಿಎಂಪಿ ಪಾಲಿಕೆ ಸಭೆಯನ್ನು ವಿಸರ್ಜಿಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. 
  
ಕಾನೂನುಬಾಹಿರ ಚಟುವಟಿಕೆಯನ್ನು ಕೂಡ ಎಷ್ಟೊಂದು ಹೆಮ್ಮೆಯಿಂದ ನಡೆಸುತ್ತೀರಲ್ಲಾ ಎಂದು ಅಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ ಪ್ರಕರಣದ ತೀರ್ಪನ್ನು ನಾಳೆಗೆ ಕಾಯ್ದಿರಿಸಿತು. 
  
ಘನ ತ್ಯಾಜ್ಯ ವಿಲೇವಾರಿಯ ಗುತ್ತಿಗೆ ಹಾಗೂ ಪಾಲಿಕೆ ಸದಸ್ಯರು ಶಾಮೀಲಾಗಿ ವಾರ್ಷಿಕ ಸಾವಿರ ಕೋಟಿಗೂ ಹೆಚ್ಚು ಬಜೆಟ್ ಹೊಂದಿದ ತ್ಯಾಜ್ಯ ವಿಲೇವಾರಿ ವಿಭಾಗದಲ್ಲಿ ವ್ಯಾಪಕ ಅಕ್ರಮ ನಡೆಸುತ್ತಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

SCROLL FOR NEXT