ರಾಜ್ಯ

ವಿಧಾನಸಭೆಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 

Srinivas Rao BV

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದು, ವಿಧಾನಸಭೆಯ 
ಇತಿಹಾಸದಲ್ಲೇ ಮೊದಲ ಬಾರಿಗೆ ಸಭಾಧ್ಯಕ್ಷರೊಬ್ಬರು ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ. 

ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಅವರನ್ನು ವಿಧಾನಸಭಾಧ್ಯಕ್ಷರ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದ್ದು, ಈ ನಡೆ ಚರ್ಚೆಗೆ ಗ್ರಾಸವಾಗಿದೆ. 

ಸ್ಪೀಕರ್ ನಡೆಗೆ ವಿಧಾನಸಭೆ ಸಚಿವಾಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಾಲಿ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. 

SCROLL FOR NEXT