ರಾಜ್ಯ

ಹಾವೇರಿ: ಪರೀಕ್ಷೆಯಲ್ಲಿ ನಕಲು ತಪ್ಪಿಸಲು ಮಾಸ್ಟರ್ ಪ್ಲಾನ್!

Nagaraja AB

ಹಾವೇರಿ: ಪರೀಕ್ಷೆಯಲ್ಲಿ ನಕಲು ತಪ್ಪಿಸಲು  ಹಾವೇರಿಯ ಕಾಲೇಜುವೊಂದರ  ಆಡಳಿತ ಮಂಡಳಿ ಮಾಸ್ಟರ್ ಪ್ಲಾನ್ ಮಾಡಿದೆ. ಭಗತ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕ್ರಮ ಇದೀಗ ಎಲ್ಲೆಡೆ ವೈರಲ್ ಆಗಿದೆ.

ರಸಾಯನ ಶಾಸ್ತ್ರದ ತ್ರೈಮಾಸಿಕ ಪರೀಕ್ಷೆ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಲೆಗೆ ರಟ್ಟಿನ ಬಾಕ್ಸ್ ಹಾಕಿಸಿ, ಕಣ್ಣು ಮಾತ್ರ ಕಾಣಿಸುವಂತೆ ಕಿಂಡಿ ಬಿಟ್ಟು ಪರೀಕ್ಷೆ ಬರೆಸಲಾಗಿದೆ. ವಿದ್ಯಾರ್ಥಿಗಳು ನಕಲು ಮಾಡಬಾರದು ಎಂಬ ಉದ್ದೇಶದಿಂದ ಕಾಲೇಜಿನ ಆಡಳಿತ ಮಂಡಳಿ ಈ ರೀತಿ ಪರೀಕ್ಷೆ ಬರೆಸಿದೆ. 30 ಕ್ಕೂ ಅಧಿಕ ವಿದ್ಯಾರ್ಥಿಗಳು ಉಸಿರಾಡಲೂ ಕಷ್ಟಪಡುತ್ತಾ ಪರೀಕ್ಷೆ ಬರೆದಿದ್ದಾರೆ.

ಸಾಹಸಪಟ್ಟು ಪ್ರಶ್ನೆ ಪತ್ರಿಕೆ ಓದಿಕೊಂಡು ಹೇಗೋ ಪರೀಕ್ಷೆ ಬರೆದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಈ ಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಡಿಡಿಪಿಐ ಎಸ್. ಸಿ. ಫೀರಜಾದೆ, ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದು, ಮೂರು ದಿನಗಳೊಳಗೆ ಲಿಖಿತ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.

SCROLL FOR NEXT