ರಾಜ್ಯ

ಮಹದಾಯಿ ನ್ಯಾಯಮಂಡಳಿ ಆದೇಶದ ಅಧಿಸೂಚನೆ ಹೊರಡಿಸಿ: ಉ.ಕ ರೈತರ ಪ್ರತಿಭಟನೆ  

Sumana Upadhyaya

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಲ್ಲಿ ಬ್ಯುಸಿಯಾಗಿದ್ದರೆ ಇತ್ತರ ಉತ್ತರ ಕರ್ನಾಟಕ ಭಾಗದ ರೈತರು ರಾಜಧಾನಿ ಬೆಂಗಳೂರಿಗೆ ಬಂದು ಮಹದಾಯಿ ನ್ಯಾಯಮಂಡಳಿ ಆದೇಶದ ಅಧಿಸೂಚನೆ ಹೊರಡಿಸಿ, ಕರ್ನಾಟಕದ ರೈತರು ತಮ್ಮ ಭಾಗದ ನದಿ ನೀರನ್ನು ವ್ಯವಸಾಯಕ್ಕೆ ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.


ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಜವಾಬ್ದಾರಿ ನಿರ್ವಹಿಸುವಲ್ಲಿ ಸೋತಿದ್ದಾರೆ. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನ್ಯಾಯಮಂಡಳಿ ಆದೇಶ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಲು ನೆರವಾಗಿ ಎಂದು ಕೇಳಿಕೊಳ್ಳಲು ಬಂದಿದ್ದೇವೆ ಎಂದು ರಾಜ್ಯ ರೈತ ಸೇನೆಯ ಅಧ್ಯಕ್ಷ ವೀರೇಶ್ ಸೊಬರದ್ ಮಠ ಹೇಳಿದರು.


ರೈತರಿಗೆ ಇನ್ನೂ ರಾಜ್ಯಪಾಲರ ಭೇಟಿಗೆ ಅವಕಾಶ ಸಿಕ್ಕಿಲ್ಲ. ಬೆಂಗಳೂರು ನಗರ ರೈಲ್ವೆ ನಿಲ್ದಾಣದ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಮುಂದುವರಿದಿದೆ. ರಾಜ್ಯಪಾಲರ ಭೇಟಿಗೆ ಅವಕಾಶ ಸಿಗದೆ ನಾವು ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.


ನ್ಯಾಯಮಂಡಳಿ ಆದೇಶವನ್ನು ಅಧಿಸೂಚನೆ ಹೊರಡಿಸಿದ ನಂತರ ರಾಜ್ಯ ಸರ್ಕಾರ ಕಳಸಾ ಬಂಡೂರಿ ಯೋಜನೆ ಆರಂಭಿಸಬಹುದು. ಇದರಿಂದ ಮುಂಬೈ-ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಗೆ ಸಾಕಷ್ಟು ನೀರು ಪೂರೈಕೆಯಾಗುತ್ತದೆ.

SCROLL FOR NEXT