ರಾಜ್ಯ

ಕಿತ್ತೂರು ಚೆನ್ನಮ್ಮಗೆ ಭಾರತ ರತ್ನ ನೀಡಿ:  ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

Raghavendra Adiga

ಬೆಂಗಳೂರು: ನೆರೆಹಾನಿ ಹಿನ್ನೆಲೆಯಲ್ಲಿ ಈ ಬಾರಿ‌ ಕಿತ್ತೂರು ರಾಣಿ‌ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಅಖಿಲ ಭಾರತ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಸಮಿತಿ ತೀರ್ಮಾನಿಸಿದೆ. ಇದರೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರಮರಣವನ್ನಪ್ಪಿರುವ ಕಿತ್ತೂರು ಚೆನ್ನಮ್ಮಗೆ ಮರಣೋತ್ತರ ಭಾರತ‌ರತ್ನ‌ ಪ್ರಶಸ್ತಿ ನೀಡುವಂತೆ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿ‌ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶನಿವಾರ ನಗರದಲ್ಲಿ ಬಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013 ರಿಂದ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ವರ್ಷವೂ ಜಯಂತಿ ಆಚರಣೆಗೆ ಸಿದ್ಧತೆ ನಡೆಸಿದೆ. ಆದರೆ ಉತ್ತಕರ್ನಾಟಕ ಪ್ರವಾಹಕ್ಕೆ ತತ್ತರಿಸಿದೆ. ಹೀಗಾಗಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಜಯಂತಿ ಆಚರಣೆಗೆ ಮೀಸಲಿಟ್ಟಿದ್ದ 64 ಲಕ್ಷ ರೂ.ಗಳನ್ನು ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಲು ತೀರ್ಮಾನಿಸಲಾಗಿದೆ ಎಂದರು.

ಉತ್ತರಕರ್ನಾಟಕ ಪ್ರವಾಹಕ್ಕೆ ತತ್ತರಿಸಿ ಹೋಗಿದ್ದು, ಒಂದು ಲಕ್ಷ ಕೋಟಿಗೂ ಹೆಚ್ಚು ಹಾನಿಯಾಗಿದೆ. ಸರ್ಕಾರವೇ 38 ಸಾವಿರ ಕೋಟಿ ನಷ್ಟವಾಗಿದೆ ಎಂದು ಒಪ್ಪಿದೆ. ಹೀಗಾಗಿ ರಾಜ್ಯದ ನೆರೆಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಹೆಚ್ಚಿನ ನೆರವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದರು.

SCROLL FOR NEXT