ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಬೈಕ್ -ಟಿಪ್ಪರ್ ನಡುವೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಎರಡು ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ  ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ: ಎರಡು ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ  ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಪುರ ಗ್ರಾಮದ ಕೃಷ್ಣೇಗೌಡರ ಪತ್ನಿ ಸುಲೋಚನ(26) ಮತ್ತು ಮಂಡ್ಯದ ದುದ್ದ ಹೋಬಳಿ ಹೊನ್ನೇನಹಳ್ಳಿ ಗ್ರಾಮದ ಕುಮಾರ (26) ಎಂಬುವವರೇ ಮೃತ ದುರ್ದೈವಿಗಳು..

ಕೃಷ್ಣೇಗೌಡ ದಂಪತಿ ಮರಡಹಳ್ಳಿ ಗ್ರಾಮದಿಂದ ತಮ್ಮ ಊರಿಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೈಕಿನ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದೆ,  ವೇಳೆ ಕೃಷ್ಣೇಗೌಡರ ಹಿಂದೆ ಕುಳಿತಿದ್ದ ಪತ್ನಿ ಸುಲೋಚನ ರಸ್ತೆಗೆ ಬಿದ್ದಾಗ ಹಿಂದೆ ಬರುತ್ತಿದ್ದ ಟಿಪ್ಪರ್ ಹರಿದು ಸುಲೋಚನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕಿನಲ್ಲಿದ್ದ ಕುಮಾರ ಎಂಬಾತನಿಗೆ ಗಂಭೀರ ಸ್ವರೂಪದ ಪೆಟ್ಟಾಗಿ ಮೈಸೂರಿಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಅಪಘಾತದ ಸ್ಥಳಕ್ಕೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್. ಸುಧಾಕರ್ ಅವರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಆರೋಪ: ಮೈಸೂರು- ಕೆ.ಆರ್.ಪೇಟೆ ಮುಖ್ಯ ರಸ್ತೆಯಲ್ಲಿ ಅನೇಕ ಹಂಪ್ಸ್ ಗಳು ಇದ್ದು ಈ ರೀತಿ ಅನೇಕ ಅಪಘಾತಗಳಿಗೆ ಕಾರಣವಾಗಿವೆ ಹಾಗಾಗಿ ರಸ್ತೆ ಹಂಪ್ಸ್ ಗಳನ್ನು ತೆರವುಗೊಳಿಸಬೇಕು ಎಚ್ಚರಿಕೆ ಫಲಕಗಳನ್ನು ಹಾಕಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

- ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!