ರಾಜ್ಯ

ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ  

Sumana Upadhyaya

ಬೆಂಗಳೂರು: ಮೂರು ತಿಂಗಳ ಹಿಂದೆ ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಬಂಡೆಕಲ್ಲುಗಳು ಮನೆಯ ಮೇಲೆ ಉರುಳಿ ಬೀಳುವ ಅಪಾಯ ಎದುರಾಗಿದೆ. 


ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯಕ್ಕೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಭಾರೀ ಹೆಚ್ಚಳವಾಗಿದೆ.


ರಾಜಧಾನಿ ಬೆಂಗಳೂರಿನಲ್ಲಿಯೂ ಇಂದು ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಶಿವಮೊಗ್ಗ ಪಟ್ಟಣದಲ್ಲಿ ತಗ್ಗು ಪ್ರದೇಶದ 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ವಿವಿಧೆಡೆ ಹಳ್ಳಕೊಳ್ಳಗಳು ಉಕ್ಕಿ ಹರಿದು ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಜಲಸಮಾಧಿಯಾಗಿವೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಶುರುವಾಗಿದೆ. ರಾಜ್ಯದ ಹಲವು ಕಡೆಗಳಿಂದ ಮಳೆ ವರದಿಗಳು ಬರುತ್ತಿವೆ.

SCROLL FOR NEXT