ಬಿಸಿ. ಪಾಟೀಲ್ 
ರಾಜ್ಯ

ಅನರ್ಹ ಶಾಸಕರಿಗೆ 'ಸುಪ್ರೀಂ' ನ್ಯಾಯ ದೊರಕಿಸಲಿದೆ: ಬಿಸಿ. ಪಾಟೀಲ್

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನ್ಯಾಯ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. 

ಮೈಸೂರು: ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನ್ಯಾಯ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. 

ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ತಮ್ಮನ್ನು 15ನೇ ವಿಧಾನಸಭೆ ಉಳಿದ ಅವಧಿಗೆ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್'ನಲ್ಲಿ ಸಲ್ಲಿಸಿರುವ ಅರ್ಜಿಯ ಮಹತ್ವದ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುವುದಿಲ್ಲ. 17 ಬಂಡಾಯ ಶಾಸಕರಿಗೆ ಸುಪ್ರೀಂಕೋರ್ಟ ನ್ಯಾಯ ದೊರಕಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಎಲ್ಲಾ ಅನರ್ಹ ಶಾಸಕರೂ ರಾಜಧಾನಿ ದೆಹಲಿಗೆ ತೆರಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಬಂಡಾಯ ಶಾಸಕರನ್ನು ಬಿಜೆಪಿ ಖರೀದಿ ಮಾಡಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಯನ್ನು ತಿರಸ್ಕರಿಸಿರುವ ಅವರು, ಖರೀದಿ ಮಾಡಲು ನಾವೇನು ಹಸುಗಳಲ್ಲ. ಆಧಾರ ರಹಿತ ಹೇಳಿಕೆಗಳು ನಾಯಕರ ಸಂಸ್ಕೃತಿಯನ್ನು ತೋರಿಸುತ್ತದೆ. ಮೈತ್ರಿ ಸರ್ಕಾರ ಸಹಕಾರ ಸಮಿತಿಯಲ್ಲಿ ಮುಖ್ಯಸ್ಥರಾಗಿದ್ದ ಸಿದ್ದರಾಮಯ್ಯ ಅವರು ನಮ್ಮನ್ನು ಸರಿಯಾಗಿ ನಡೆಸಿಕೊಂಡಿರಲಿಲ್ಲ. ಅರ್ಹ ಸ್ಥಾನಗಳನ್ನು ನೀಡಿರಲಿಲ್ಲ ಎಂದು ಆರೋಪಿಸಿದ್ದಾರೆ. 

ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ. ಯಾವ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕೆಂಬುದು ಇನ್ನೂ ನಿರ್ಧರಿಸಿಲ್ಲ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಯಾವುದೇ ಕಾರಣಕ್ಕೂ ಹಿಂತಿರುವುದಿಲ್ಲ. ಉಪ ಚುನಾವಣೆಗೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಉತ್ತರ ಕರ್ನಾಟಕ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...