ಬೆಂಗಳೂರು: ಖಾಸಗಿ ಹಾಗೂ ಅನುದಾನ ರಹಿತ ಶಾಲೆಗಳಲ್ಲೂ ಇನ್ನು ಮುಂದೆ ಬಿಸಿಯೂಟ ಸಿಗಲಿದೆ.
ಕನ್ನಡ ಮಾಧ್ಯಮ ಶಾಲೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅನುದಾನ ರಹಿತ ಹಾಗೂ ಖಾಸಗಿ ಶಾಲೆಗಳಿಗೂ ಬಿಸಿಯೂಟ ನೀಡಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಬಿಸಿಯೂಟ ಯೋಜನೆ ವಿಸ್ತರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಗೆ ನೀಡಿದ್ದಾರೆ. ಪ್ರಸ್ತುತ ಬಿಸಿಯೂಟ ಯೋಜನೆ ಕೇವಲ ಸರ್ಕಾರ ನಡೆಸುತ್ತಿರುವ ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತಿದ್ದು. ಆದರೆ, ಅನುದಾನ ರಹಿತ ಹಾಗೂ ಖಾಸಗಿ ಶಾಲೆಗಳಿಗೂ ವಿಸ್ತರಿಸಿದೆ. ಪಠ್ಯ ಪುಸ್ತಕ, ಪುಸ್ತಕಗಳು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳ ನೀಡಲು ಟೆಂಡರ್ ಕರೆಯಲು ನಿರ್ಧರಿಸಲಾಗಿದ್ದು, ಯೋಜನಗೆ ರೂ.263 ಕೋಟಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.