ಸಾಂದರ್ಭಿಕ ಚಿತ್ರ 
ರಾಜ್ಯ

ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಚಾಮರಾಜನಗರ: ವೃದ್ಧರೊಬ್ಬರು ಕರಡಿ ದಾಳಿಗೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.

ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಜಮೀನಿನಲ್ಲಿ ಇದ್ದ ವೇಳೆ ವೃದ್ಧ ಮಹದೇವ ಶೆಟ್ಟಿ(70) ಎಂಬುವರು ಕರಡಿ ದಾಳಿಗೆ ಬಲಿಯಾಗಿದ್ದಾರೆ. 
ಓಂಕಾರ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿ ಹೆಚ್ಚಿರುವುದರಿಂದ ಕರಡಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತೆರಕಣಾಂಬಿ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ‌.

ಗಡಿ ಜಿಲ್ಲೆಯಲ್ಲಿ ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹುಲಿ, ಚಿರತೆ, ಆನೆ ಬಳಿಕ ಈಗ ಜನರಿಗೆ ಕರಡಿ ಭೀತಿ ಶುರುವಾಗಿದೆ.

ಕೊಲೆಯೂ ಆಗಿರಬಹುದು
ವ್ಯಕ್ತಿಯ ಮುಖದ ಮೇಲೆ ಮಾತ್ರ ಗಾಯದ ಗುರುತುಗಳಿದ್ದು, ಯರಾದರೂ ಕೊಲೆ ಮಾಡಿ ಬಿಸಾಡಿದ ಬಳಿಕ ಕಾಡುಪ್ರಾಣಿಗಳು ತಿಂದು ಹಾಕಿರುವ ಶಂಕೆಯೂ ವ್ಯಕ್ತವಾಗಿದೆ.

ವರದಿ: ನಂದೀಶ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT