ರಾಜ್ಯ

ಫೆಲೋಶಿಪ್ ನೀಡದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

Nagaraja AB

ಬಳ್ಳಾರಿ: ಫೆಲೋಶಿಪ್ ನೀಡದ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿರುದ್ದ ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಂದ ಸುಮಾರು ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡದ ಹಿನ್ನೆಲೆಯಲ್ಲಿ ವಿಶ್ವ ವಿದ್ಯಾನಿಲಯದ ಗೇಟ್ ಮುಂಭಾಗದಲ್ಲಿ ಕುಳಿತು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. 

ಕಳೆದ ಎರಡು ತಿಂಗಳ ಹಿಂದೆ ವಿವಿಯ ಕ್ರಿಯಾ ಶಕ್ತಿ ಭವನದ ಮುಂದೆ ಮೂರು ದಿನಗಳ ಕಾಲ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು, ಎರಡನೇ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಹತ್ತು ಸಾವಿರ ಫೆಲೋಶಿಪ್ ಕೊಡಬೇಕಿದೆ ಆದರೆ, ಕಳೆದ ಎರಡು ವರ್ಷಗಳಿಂದ ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಿಲ್ಲ ಎಂದು  ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಎಸ್.ಎಪ್.ಐ.ಮತ್ತು ಎ.ಐ.ಡಿ.ಎಸ್.ಒ.ಹಾಗೂ ಎ.ಐ.ಎಸ್.ಎಪ್.ಕೆ.ವಿ.ಎಸ್. ಮತ್ತಿತರ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.

SCROLL FOR NEXT