ಡಾ.ಸಿಎನ್. ಅಶ್ವತ್ ನಾರಾಯಣ್ 
ರಾಜ್ಯ

ಸಾಲಮನ್ನಾ ಯೋಜನೆಗೆ 45 ಸಾವಿರ ಕೋಟಿ ಖರ್ಚಾಗುತ್ತದೆ: ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ನಡೆದಿದೆಯೇ ಎಂಬುದು ಆದಾಯ ತೆರಿಗೆ ಇಲಾಖೆ ತನಿಖೆ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ. 

ಮಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ನಡೆದಿದೆಯೇ ಎಂಬುದು ಆದಾಯ ತೆರಿಗೆ ಇಲಾಖೆ ತನಿಖೆ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಅವರು ಹೇಳಿದ್ದಾರೆ. 
  
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವೈದ್ಯಕೀಯ ಕಾಲೇಜುಗಳ ನಡುವೆ ಇರುವ ಒಪ್ಪಂದದಲ್ಲಿ ಸೀಟ್‌ ಬ್ಲಾಕಿಂಗ್‌ಗೆ ಅವಕಾಶವಿದೆ. ಸೀಟ್ ಬ್ಲಾಕಿಂಗ್ ಬಗ್ಗೆ ದೂರು, ಆರೋಪಗಳಿದ್ದರೂ ಒಪ್ಪಂದದಲ್ಲೇ ಅವಕಾಶ ಇರುವ ಕಾರಣ ತಪ್ಪಾಗಿದೆ ಅಥವಾ ಸೀಟು ಬ್ಲಾಕಿಂಗ್ ಅವಕಾಶವನ್ನು ದುರ್ಬಳಕೆ ಆಗಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ. ಇದು ಐಟಿ ಇಲಾಖೆ ತನಿಖೆಯಿಂದಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಬೇಕಾಗಿದೆ ಎಂದು ಅವರು ಹೇಳಿದರು.

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳಿವೆ. ಈ ಸೀಟುಗಳು ಭರ್ತಿಯಾಗದೇ ಇದ್ದಾಗ ಅವುಗಳನ್ನು ಸಂಬಂಧಿಸಿದ 
ಕಾಲೇಜುಗಳಿಗೆ ಹಂಚಿಕೆ ಮಾಡಲಾಗುತ್ತದೆ. ಅದನ್ನು ಕೆಲವು ಶಿಕ್ಷಣ ಸಂಸ್ಥೆಗಳು ದುರುಪಯೋಗ ಪಡಿಸಿಕೊಂಡಿವೆ ಎಂಬುದು ಆರೋಪ. ಆದರೆ, ಡಾ.ಪರಮೇಶ್ವರ್ ಅವರ ಸಿದ್ದಾರ್ಥ ಹಾಗೂ ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲಿನ ಆರೋಪಗಳ ಬಗ್ಗೆ ಇದು ಇನ್ನೂ ಸ್ಪಷ್ಟವಾಗಿ ಗೊತ್ತಾಗಿಲ್ಲ. ಅಘೋಷಿತ ಆಸ್ತಿ, ಅಕ್ರಮ ಹಣ ಹಾಗೂ ಕಪ್ಪು ಹಣ ವಿಚಾರದಲ್ಲಿ ಐಟಿ ದಾಳಿಯಾಗಿದೆ. ಅದನ್ನು ಶಿಕ್ಷಣ ಸಂಸ್ಥೆ ಯಾವ ಮೂಲದಿಂದ ಸಂಗ್ರಹಿಸಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
  
ಸಾಮಾನ್ಯವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ಮ್ಯಾನೇಜ್‌ ಮೆಂಟ್‌ ಹಾಗೂ ಎನ್‌ಆರ್‌ಐ ಸೀಟ್‌ಗಳ ಶುಲ್ಕದಲ್ಲಿ ಅವ್ಯವಹಾರ ನಡೆದಿದ್ದರೆ ಈ ರೀತಿಯ ದಾಳಿ ನಡೆಯುತ್ತದೆ. ಇದೀಗ ಸೀಟ್ ಬ್ಲಾಕಿಂಗ್ ದಂಧೆಯ ಬಗ್ಗೆಯೂ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಐಟಿ ತನಿಖೆ ಹೆಚ್ಚಿನ ಬೆಳಕು ಚೆಲ್ಲಲಿದೆ. ಆ ಬಳಿಕ ಸರ್ಕಾರ ಮುಂದೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸುವುದಾಗಿ ಅವರು ಸ್ಪಷ್ಟಪಡಿಸಿದರು.
  
ಇದೇ ವೇಳೆ ರೈತರ ಸಾಲ ಮನ್ನಾ ಯೋಜನೆಗೆ 40 ಸಾವಿರ ಕೋಟಿ ರೂ ಖರ್ಚಾಗುತ್ತದೆ. ಹಿಂದಿನ ಸರ್ಕಾರ 15 ಸಾವಿರ ಕೋಟಿ ಖರ್ಚುಮಾಡಿದ್ದು, ಅದರಲ್ಲಿ ಜಮಾ ಮಾಡುವುದು ಸ್ವಲ್ಪ ಬಾಕಿ ಉಳಿದಿದೆ. ಇದರೊಂದಿಗೆ ಅತಿವೃಷ್ಠಿ, ಅನಾವೃಷ್ಠಿಗಳಿಗೆ ಪರಿಹಾರವನ್ನೂ ಒದಗಿಸಬೇಕಾಗುತ್ತದೆ. ಹಳೆಯ ಬಜೆಟ್ ನಲ್ಲಿ ಕೆಲಸ ಮಾಡುತ್ತಿರುವುದರಿಂದ ಈ ಎಲ್ಲಾ ಸವಾಲುಗಳನ್ನು ಎದುರಿಸಲು ಹಣ ಹೊಂದಾಣಿಕೆ ಕಷ್ಟ. ಅದಕ್ಕಾಗಿ ಹೊಸ ಯೋಜನೆಗಳನ್ನು ಘೋಷಿಸುತ್ತಿಲ್ಲ. ಮುಂದಿನ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗುವುದು ಎಂದು ಗೊಂದಲದ ಹೇಳಿಕೆ ನೀಡಿದ್ದಾರೆ.
  
ಸಾಲ ಮನ್ನಾಕ್ಕೆ ಕೆಲವು ಪ್ರಕ್ರಿಯೆಗಳಿರುತ್ತವೆ. ಅಗತ್ಯ ದಾಖಲೆಗಳನ್ನು ಒದಗಿಸಿದ ಬಳಿಕ ಸಾಲ ಮನ್ನಾ ಆಗಬೇಕಾಗುತ್ತದೆ. ಹೀಗಾಗಿ ಕೆಲವು ಲೋಪಗಳು ಆಗಿರಬಹುದು. ಅದೆಲ್ಲವನ್ನೂ ಸರಿಪಡಿಸಿ ಯಾರು ಯಾರೆಲ್ಲಾ ಯೋಜನೆ ವ್ಯಾಪ್ತಿಗೆ ಬರುತ್ತಾರೋ ಅವರೆಲ್ಲರ ಸಾಲ ಮನ್ನಾ ಮಾಡಲು ಸರ್ಕಾರ ಬದ್ಧವಾಗಿದೆ  ಎಂದರು.
  
ಹೊಸ ಶಿಕ್ಷಣ ನೀತಿ ಜಾರಿಗಳಿಸುವ ಬಗ್ಗೆ ಈಗಾಗಲೇ ಪ್ರಸ್ತಾಪಿಸಿದ್ದೇನೆ. ಅದರ ಕರಡು ಸಿದ್ಧವಾಗುತ್ತಿದ್ದು, ಈ ವೇಳೆ ರಾಷ್ಟ್ರೀಯ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಲೇಬೇಕು. ಇದರ ಜತೆಗೆ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನೂ ರೂಪಿಸಬಹು ದು. ಆದ್ದರಿಂದ ಹಣಕಾಸು ಹಂಚಿಕೆ, ಆಗಬೇಕಾಗಿರುವ ಬದಲಾವಣೆ ಮುಂತಾದ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿ ರೂಪಿಸಲಾಗುವುದು  ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT