ಬಸವರಾಜ್ ಬೊಮ್ಮಾಯಿ 
ರಾಜ್ಯ

ರಾಜ್ಯದಲ್ಲಿ ಎನ್ಆರ್'ಸಿ ಖಚಿತ: ಗೃಹ ಸಚಿವ ಸ್ಪಷ್ಟನೆ

ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ (ಎನ್ಆರ್'ಸಿ) ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ (ಎನ್ಆರ್'ಸಿ) ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಕರ್ನಾಟಕದಲ್ಲಿ ಎನ್ಆರ್'ಸಿ ಜಾರಿ ಖಚಿತ. ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅಕ್ರಮ ವಲಸಿಗರ ಕುರಿತು ಮಾಹಿತಿ ಸಂಗ್ರಹಿಸಲಾಗಿದ್ದು, ವರದಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದೆ. ರಾಜ್ಯದ ಪ್ರಾಮಾಣಿಕ ನಾಗರೀಕರಿಗೆ ಯಾವುದೇ ರೀತಿಯ ಸಮಸ್ಯೆಯಿಲ್ಲ. ಅಕ್ರಮ ವಲಸಿಗರು ಹಾಗೂ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು ಮತ್ತು ಮಾದಕವಸ್ತುಗಳ ವಿರುದ್ಧ ಹೋರಾಡಲು ಮಂಗಳೂರು ಮತ್ತು ಉಡುಪಿಯಲ್ಲಿ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT