ಬರಗಿ ಕೆರೆ 
ರಾಜ್ಯ

ಚಾಮರಾಜನಗರ: ಬರಗಿ ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರುಪಾಲು

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಏಳು ಮಂದಿಯಲ್ಲಿ ಒಬ್ಬ ಮೃತಪಟ್ಟ ಘಟನೆ ಶನೊವಾರ ನಡೆದಿದೆ..  

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಏಳು ಮಂದಿಯಲ್ಲಿ ಒಬ್ಬ ಮೃತಪಟ್ಟ ಘಟನೆ ಶನೊವಾರ ನಡೆದಿದೆ.. 

ನಂದೀಶ್ (18) ಮೃತ ಯುವಕನಾಗಿದ್ದು ತಾಲೂಕಿನ ಚಿಕ್ಕತುಪ್ಪೂರು ಗ್ರಾಮದ ತನ್ನ ಸ್ನೇಹಿತರೊಂದಿಗೆ ಬರಗಿ ಕೆರೆಗೆ ಈಜಲು ತೆರಳಿದ್ದ.

ಕೆರೆಗೆ ತೆರಳಿದ್ದವರಲ್ಲಿ ಒಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದು ಬಂದಿದೆ.ಬರಗಿ ಕೆರೆಗೆ ತೆರಳಿದಾಗ ಮೃತ ಯುವಕನ ಎಲ್ಲಾ ಸ್ನೇಹಿತರು ಕೆರೆ ತುದಿಯಲ್ಲೇ ಇದ್ದರು. ನಂದೀಶ ಮಾತ್ರ ಕೆರೆಗಿಳಿದು ನೀರಿನಲ್ಲಿ ಮುಳುಗಿ ಸಹಾಯಕ್ಕಾಗಿ ಅಂಗಲಾಚಿದ್ದ. ಆದರೆ, ಸ್ನೇಹಿತರಿಗೂ ಈಜು ಬಾರದ ಕಾರಣ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು