ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು
ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ
ಬಳ್ಳಾರಿ: ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ
.
ಮೃತರನ್ನು ಬುಸ್ಸಿ (21), ದಾದಾ ಕಲಂದರ (31), ಅಸ್ಲಂ (25) ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ದುರ್ಘಟನೆಯಲ್ಲಿ ಪರಶುರಾಮ (28) ಮತ್ತು ಮನ್ಸೂರ್ (30) ಎಂಬುವವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ .
ಘಟನೆಗೆ ಸಂಬಂಧಿಸಿದಂತೆ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.