ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು
ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .
ಚಾಮರಾಜನಗರ: ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .
ಸಣ್ಣಮ್ಮ ಮೃತ ದುರ್ದೈವಿ, ಇವರು ಗ್ರಾಮದ ಶಿವಶಂಕರ್ ಎಂಬುವರ ಜಮೀನಿನಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಜಮೀನಿನ ಸುತ್ತಲೂ ವಿದ್ಯುತ್ ಸೋಲಾರ್ ಬಿಡಲಾಗಿತ್ತು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಧ್ಯೆ ಮಹಿಳೆ ಬಹಿರ್ದೆಸೆಗೆ ತೆರಳಿದ್ದಾರೆ.
ಬಹಿರ್ದೆಸೆ ಮುಗಿಸಿ ಮತ್ತೆ ಹಿಂದಿರುಗುವ ವೇಳೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಅಸ್ವಸ್ಥಗೊಂಡರು. ಈ ವೇಳೆ ಅಸ್ವಸ್ಥರಾದ ಮಹಿಳೆ ಸಣ್ಣಮ್ಮ ಅವರನ್ನು ಸಂತೇಮರಹಳ್ಳಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಕರೆದೊಯ್ಯಲಾಯಿತು. ನಂತರ ಚಿಕಿತ್ಸೆ ಕೊಡಿಸ ಲಾಯಿತಾದರೂ ಅದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರಾದ ತಾಯಮ್ಮ ಕುದೇರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.