ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಮನೆ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವು: ತಾಯಿಗೆ ಗಂಭೀರ ಗಾಯ

ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ಬಾಗಲಕೋಟೆ: ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ಮಗು ಅಚಲ ಭುಜಬುಲಿ ತಿಮ್ಮಣ್ಣವರ  ಎಂಬ 11 ತಿಂಗಳ ಮಗು  ಮೇಲ್ಛಾವಣಿ ಕುಸಿತಕ್ಕೆ ಸ್ಥಳದಲ್ಲಿ ಸಾವನ್ನಪ್ಪಿದೆ.ತಾಯಿ ಅರ್ಚನ ಭುಜಬುಲಿ ತಿಮ್ಮಣ್ಣವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಕೆ ಎಲ್ ಇ  ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬುಧವಾರ ರಾತ್ರಿ ಮನೆಯಲ್ಲಿ ನಾಲ್ವರು ಮಲಗಿದ್ದರು. ಬಳಿಕ ಇಂದು ಬೆಳಗ್ಗಿನ ನ ಜಾವ ಸುಮಾರು ನಾಲ್ಕು ಗಂಟೆಗೆ ಇಬ್ಬರು ಎದ್ದು ಹೊರಗಡೆ ಬಂದಿದ್ದರು. ಆದರೆ ತಾಯಿ, ಮಗು ಇನ್ನೂ ಮಲಗಿದ್ದರು. ಈ ವೇಳೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಮಗು ಮೃತಪಟ್ಟಿದ್ದು, ತಾಯಿಗೆ ಗಂಭೀರ ಗಾಯಗಳಾಗಿದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT