ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ಐದು ಮಕ್ಕಳು ಮುಂಬಯಿಯಲ್ಲಿ ಪತ್ತೆ

ಜಿಲ್ಲೆಯ ಸೇಡಂ ತಾಲೂಕಿನ ಕೊತ್ತಪಲ್ಲಿ ತಾಂಡಾದಿಂದ ನಾಪತ್ತೆಯಾಗಿದ್ದ ಐದು ಜನ ಶಾಲಾ ಮಕ್ಕಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ.

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊತ್ತಪಲ್ಲಿ ತಾಂಡಾದಿಂದ ನಾಪತ್ತೆಯಾಗಿದ್ದ ಐದು ಜನ ಶಾಲಾ ಮಕ್ಕಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ. ಮುಂಬೈನ ತಮ್ಮ ಪರಿಚಯಸ್ಥರು ಇರುವ ಅಲಿಭಾಗ ಎಂಬ ಪ್ರದೇಶದಲ್ಲಿ ಹೋಟೆಲ್‌ವೊಂದರಲ್ಲಿ ಕೆಲಸ ಕೇಳಲು ತೆರಳಿದಾಗ ಅನುಮಾನಗೊಂಡ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. 

ಮುಧೋಳ ಗ್ರಾಮದ ಸರಕಾರಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಅಂಕುಶ ಗಣೇಶ ಜಾಧವ (14), ಜೇತಲಾ ಚಂದಾ ರಾಠೋಡ (14), ಜೀತು ಬನ್ಸಿಲಾಲಾ ರಾಠೋಡ (16), ಅರ್ಜುನ ಬಾಡು ರಾಠೋಡ (14), ರವೀಂದ್ರ ಹಣಮಂತ ರಾಠೋಡ (14) ಮಂಗಳವಾರ ನಾಪತ್ತೆಯಾಗಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಮುಧೋಳ ಪೊಲೀಸರು ತನಿಖೆ ಕೈಗೊಂಡಿದ್ದರು. 

ಮುಧೋಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಮಕ್ಕಳು ಹಾಸ್ಟೆಲ್ ಗೆ ಹೋಗುವುದಾಗಿ ಸುಳ್ಳು ಹೇಳಿ ಕೊಂತಪಲ್ಲಿ ತಾಂಡಾದಿಂದ ಮಂಗಳವಾರ ನಾಪತ್ತೆಯಾಗಿದ್ದರು.

ಪಿಐ ತಮ್ಮಾರಾಯ ಪಾಟೀಲ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಬೆಂಗಳೂರು ಮತ್ತು ಮುಂಬೈನಲ್ಲಿ ನಾಪತ್ತೆಯಾದ ಮಕ್ಕಳಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ನಾಪತ್ತೆಯಾದ ಮಕ್ಕಳು ಕೊನೆಗೂ ಮುಂಬೈನಲ್ಲಿ ಪತ್ತೆಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!