ರಾಜ್ಯ

ನಾಡಧ್ವಜ ಕಡೆಗಣನೆ? ರಾಜ್ಯೋತ್ಸವಕ್ಕೆ ರಾಷ್ಟ್ರಧ್ವಜ ಹಾರಿಸಲು ಕೊಪ್ಪಳ ಬಿಇಓ ಆದೇಶ

Raghavendra Adiga

ಬೆಂಗಳೂರು: ನಾಳೆ (ಶುಕ್ರವಾರ) ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ. ಕನ್ನಡ ನಾಡಿನ ಉದಯವಾದ ಈ ದಿನವನ್ನು ಸಡಗರದಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿದೆ.

ಕನ್ನಡ ರಾಜ್ಯೋತ್ಸವದಂದು ಕೊಪ್ಪಳದಲ್ಲಿ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ  ಕಡ್ಡಾಯ ಸೂಚನೆ ಹೊರಡಿಸಿದೆ.

ನವೆಂಬರ್​​ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸುತ್ತೋಲೆ ಹೊರಡಿಸಿದೆ. ವಿಪರ್ಯಸವೆಂದರೆ ಸುತ್ತೋಲೆಯಲ್ಲಿ ಎಲ್ಲಿಯೂ ಕನ್ನಡ ಧ್ವಜ ಹಾರಾಟದ ಬಗೆಗೆ ಉಲ್ಲೇಖವಿಲ್ಲ.

ಕೊಪ್ಪಳದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

SCROLL FOR NEXT