ಕೃಷ್ಣಮೂರ್ತಿ,ಸ್ವರ್ಣಮೂರ್ತಿ 
ರಾಜ್ಯ

ಬೆಂಗಳೂರು: ಮಗ-ಸೊಸೆ ಕಿರುಕುಳ ತಾಳದೆ ವೃದ್ದ ದಂಪತಿ ಆತ್ಮಹತ್ಯೆ

ಸ್ವಂತ ಮಗ-ಸೊಸೆಯ ಕಿರುಕುಳದಿಂದ ಬೇಸತ್ತು ವೃದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಬೆಂಗಳೂರು: ಸ್ವಂತ ಮಗ-ಸೊಸೆಯ ಕಿರುಕುಳದಿಂದ ಬೇಸತ್ತು ವೃದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಮಗ-ಸೊಸೆ ನಮ್ಮನ್ನು ನಿರ್ಲಕ್ಷಿಸಿದ್ದಾರೆ. ಅತಿಯಾದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಬರೆದಿಟ್ಟು ದಂಪತಿಗಳಾದ ಗಿರಿನಗರ ನಿವಾಸಿ ಬಿಇಎಲ್‌ನ ನಿವೃತ್ತ ಅಧಿಕಾರಿ ಕೃಷ್ಣಮೂರ್ತಿ(70) ಅವರ ಪತ್ನಿ ಸ್ವರ್ಣಮೂರ್ತಿ (68)  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಂತೆ  ಆರೋಪಿಗಳಾದ ಸೊಸೆ ಸ್ನೇಹ ಹಾಗೂ ಮಗ ಮಂಜುನಾಥ್ ವಿರುದ್ಧ  ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಕಳೆದ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಪುತ್ರ ಸಾಫ್ಟ್ ವೇರ್ ಇಂಜಿನಿಯರ್ ಮಂಜುನಾಥ್‌ ಮತ್ತು ಸೊಸೆ ಸ್ನೇಹಾ ಸೂರ್ಯನಾರಾಯಣ ಅವರುಗಳು ನಮಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ದೈಹಿಕ, ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಕೃಷ್ಣಮೂರ್ತಿತಾವು ಸಾಯುವುದಕ್ಕೆ ಮುನ್ನ ಮನೆಯ ಗೋಡೆ ಮೇಲೆ ಬರೆದು ಸಹಿ ಮಾಡಿದ್ದರು. ಅಲ್ಲದೆ ಸ್ವರ್ಣಮೂರ್ತಿ ತಮ್ಮ ಹಣೆ ಮೇಲೆ  “ನನ್ನನ್ನು ಕ್ಷಮಿಸು” ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!