ರಾಜ್ಯ

ಬೆಂಗಳೂರು ನಗರ ಸಂಚಾರಕ್ಕೆ 10 ಸಾವಿರ ಎಲೆಕ್ಟ್ರಿಕ್ ಬಸ್: ನೂತನ ಡಿಸಿಎಂ ಅಶ್ವಥ್ ನಾರಾಯಣ್

Raghavendra Adiga

ಬೆಂಗಳೂರು: ನಗರದ ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ನಿಟ್ಟಿನಲ್ಲಿ  ಪರಿಸರ ಸ್ನೇಹಿ ಕ್ರಮಗಳನ್ನು ಜಾರಿಗೆ ತರುವುದು ಹೊಸ ಉಪಮುಖ್ಯಮಂತ್ರಿ ಮತ್ತು ಐಟಿಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರ ಮೊದಲ ಆದ್ಯತೆಯಾಗಿರಲಿದೆ.ಈ ಸಂಬಂಧ ಶನಿವಾರ ತಜ್ಞರೊಂದಿಗೆ ಸಭೆ ನಡೆಸಿದ ಸಚಿವರು ನಗರದಲ್ಲಿ 10,000 ಎಲೆಕ್ಟ್ರಿಕ್ ಬಸ್ಸುಗಳ ಸಂಚಾರ ಪ್ರಾರಂಭಿಸಲು ಸೂಚಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ,ಉಪನಗರ ರೈಲು ಯೋಜನೆಯನ್ನು ತ್ವರಿತಗೊಳಿಸುವುದು, ಮೆಟ್ರೋ ರೈಲುಗಳ ಆವರ್ತನ ಹೆಚ್ಚಿಸುವುದು, ಮೆಟ್ರೋ ಮಾರ್ಗಗಳ ವಿಸ್ತರಣೆ ಮತ್ತು ಹೊರ ರಿಂಗ್ ರಸ್ತೆಗಳ ಸೇರಿದಂತೆ  ಅಭಿವೃದ್ಧಿ ಕುರಿತು ನಗರದಲ್ಲಿನ ದಟ್ಟಣೆಯನ್ನು ಸರಾಗಗೊಳಿಸುವ ಮಾರ್ಗಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. "ಭೂಸ್ವಾಧೀನಕ್ಕೆ ಗಮನ ಹರಿಸುವ ಅವಶ್ಯಕತೆಯಿದೆ, ಇದನ್ನು ಚರ್ಚಿಸಬೇಕು" ಎಂದು ಹೇಳಿದ್ದಾರೆ.

ಎಲಿವೇಟೆಡ್ ಕಾರಿಡಾರ್ ಗಳಿಗೆ ಸಂಬಂಧಿಸಿದಂತೆಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿದ್ದರೂ, ಈಗ ಅದನ್ನು ಗಂಭೀರವಾಗಿ ಚರ್ಚಿಸಿ ಮುಂದೆ ಮತ್ತೆ ಜಾರಿಗೆ ಪ್ರಯತ್ನಿಸುತ್ತೇವೆ ಎಂದ ಸಚಿವರು ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ಬಿ ಮತ್ತು ಇತರ ನಾಗರಿಕ ಸಂಸ್ಥೆಗಳು ಸೇರಿದಂತೆ ವಿವಿಧ ಮಧ್ಯಸ್ಥಗಾರರ ನಡುವೆ ಸಮನ್ವಯದ ಕೊರತೆ ಇದ್ದು, ಅದನ್ನು ಬಗೆಹರಿಸಬೇಕಾಗಿದೆ ಎಂದಿದ್ದಾರೆ.

ನಗರದಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರ ಪ್ರಾರಂಭಿಸುವ ಪ್ರಸ್ತಾವನೆಯನ್ನು  ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಳಿಗೆ ಕೊಂಡೊಯ್ಯಲಾಗುವುದು ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.

SCROLL FOR NEXT