ರಾಜ್ಯ

ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರವೇ ಕೆಂಪೇಗೌಡರ ಪ್ರತಿಮೆ ನಿರ್ಮಾಣ

Shilpa D

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಇತಿಹಾಸ ಹಾಗೂ ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪ್ರಚಾರ ಪಡಿಸುವ ನಿಟ್ಟಿನಲ್ಲಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೆಂಪೇಗೌಡರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಸದಾಶಿವನಗರದ ರಮಣ ಮಹರ್ಷಿ ಉದ್ಯಾನವನದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಇದೇ ರೀತಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿ.ಎಸ್.ಯಡಿಯೂರಪ್ಪ, ಕೆಂಪೇಗೌಡರ ಕೊಡುಗೆಗಳನ್ನು ಕೊಂಡಾಡಿದರು. ಬೆಂದಕಾಳೂರಾಗಿದ್ದ ಬೆಂಗಳೂರನ್ನು ಕೆಂಪೇಗೌಡರು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡಯ್ಯಲು ಕಾರಣೀಬೂತರಾದ ಮಹಾಪುರುಷ. ಇಂದು ವಿಶ್ವದ ಮಹಾನಗರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿರುವುದು ಅತ್ಯಂತ ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರು ಇಂದು ದೇಶದ ಮಹಾನಗರಗಳಾದ ದೆಹಲಿ, ಕೊಲ್ಕತ್ತಾ, ಚೆನ್ನೈ, ಹೈದರಾಬಾದ್ ಸೇರಿದಂತೆ ಮಹಾನಗರಗಳಿಗಿಂತಲೂ ಅತ್ಯಂತ ವೇಗವಾಗಿ ಬೆಳೆದು, ಐಟಿ-ಬಿಟಿ ರಾಜಧಾನಿಯಾಗುವುದರ ಜತೆಗೆ ಉದ್ಯಾನನಗರ ಎಂಬ ಹೆಸರು ಪಡೆದಿದೆ. ಇದಕ್ಕೆಲ್ಲಾ ಕೆಂಪೇಗೌಡರೇ ಮೂಲ ಕಾರಣ. ಅಂತಹ ಮಹಾಪುರುಷನ ಜನ್ಮ ದಿನಾಚರಣೆ ನಡೆಸುವುದು ನನಗೆ ಬಂದಿರುವುದು ನನ್ನ ಸೌಭಾಗ್ಯ, ನನ್ನ ಪೂರ್ವ ಜನ್ಮದ ಪುಣ್ಯ ಎಂದರು.

SCROLL FOR NEXT