ಸಸಿಕಾಂತ್ ಸೆಂಥಿಲ್ 
ರಾಜ್ಯ

ಪ್ರಜಾಪ್ರಭುತ್ವ ಅಪಾಯದಲ್ಲಿರುವಾಗ ನಾಗರಿಕೆ ಸೇವೆ ಕಷ್ಟಸಾಧ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ 

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಐಎಎಸ್ ಸೇವೆಗೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ,

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿರುವ ಸಸಿಕಾಂತ್ ಸೆಂಥಿಲ್ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ, ಅವರು 2017 ಅಕ್ಟೋಬರ್ ನಿಂದ ದ ಕ ಜಿಲ್ಲಾಧಿಕಾರಿಯಾಗಿದ್ದರು.

ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಸಲ್ಲಿಸಿದ್ದ ಸೆಂಥಿಲ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿ ಹುದ್ದೆಗೆ ಬರುವ ಮೊದಲು ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಟಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ವೈಯಕ್ತಿಕ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸ್ಪಷ್ಟಪಡಿಸಿರುವ ಸಸಿಕಾಂತ್ ಸೆಂಥಿಲ್, ತನ್ನ ರಾಜೀನಾಮೆಗೆ ಯಾವುದೇ ವ್ಯಕ್ತಿ ಅಥವಾ ಸದ್ಯ ತಾನು ಸೇವೆ ಸಲ್ಲಿಸುತ್ತಿರುವ ದ.ಕ. ಜಿಲ್ಲಾಧಿಕಾರಿ ಅವಧಿಯಲ್ಲಿನ ಯಾವುದೇ ಘಟನೆ ಕಾರಣವಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.


“ನಮ್ಮ ವೈವಿಧ್ಯ ಪ್ರಜಾಪ್ರಭುತ್ವದ ಮೂಲಭೂತ ರಚನೆಗಳ ಜೊತೆ ಹಿಂದೆಂದೂ ಕಂಡಿರದ ರೀತಿಯಲ್ಲಿ ರಾಜಿ ಮಾಡಿಕೊಳ್ಳುವಾಗ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ನನಗೆ ಅನೈತಿಕವೆಂದು ಎನಿಸಿದ ಕಾರಣ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ದೇಶದ ಮೂಲ ಚೌಕಟ್ಟುಗಳು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಆದ್ದರಿಂದ ನಾನು ಐಎಎಸ್ ನಿಂದ ಹೊರಬಂದು ನನ್ನ ಕೆಲಸ ಮುಂದುವರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಕೂಡ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

SCROLL FOR NEXT