ಬೆಂಗಳೂರು:ಚಂದ್ರಯಾನ-2ಯೋಜನೆಯ ವಿಕ್ರಮ್ ಲ್ಯಾಂಡಿಂಗ್ ಗೆ ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನದ ಅತ್ಯಂತ ಪ್ರಮುಖ ಘಟ್ಟವನ್ನು ನೇರವಾಗಿ ಕಣ್ತುಂಬಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.
60 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ದೃಶ್ಯಗಳನ್ನು ವೀಕ್ಷಿಸಲಿದ್ದಾರೆ.
ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ನರೇಂದ್ರ ಮೋದಿ ತೆರಳಲಿದ್ದು, ಚಂದ್ರಯಾನದ ವಿಸ್ಮಯವನ್ನು ನೇರವಾಗಿ ಕಣ್ತುಂಬಿಕೊಳ್ಳಲಿದ್ದಾರೆ.