ರಾಜ್ಯ

ಡಿಕೆಶಿ ಬೆಂಬಲಕ್ಕೆ ನಿಂತ ಒಕ್ಕಲಿಗರ ಸಂಘ: ಭಾರೀ ಪ್ರತಿಭಟನೆಗೆ ನಿರ್ಧಾರ!

Shilpa D

ಮೈಸೂರು: ಮಾಜಿ ಸಚಿವ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಬಂಧನಕ್ಕೆ ಒಕ್ಕಲಿಗರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಒಕ್ಕಲಿಗರ ಸಂಘ ಬೃಹತ್  ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ನಿನ್ನೆಯವರೆಗೂ ರಾಮನಗರ ಮತ್ತು ಕನಕಪುರಗಳಲ್ಲಿ ಬಂದ್ ನಡೆದಿತ್ತು, ಹೀಗಾಗಿ ಒಕ್ಕಲಿಗ ನಾಯಕರು ಪ್ರತಿಭಟನೆಯನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ.

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆಗೆ  ಆದಾಯ ತೆರಿಗೆ ಇಲಾಖೆ ಕಾರಣ ಎಂದು ಒಕ್ಕಲಿಗರ ಸಂಘ ಆರೋಪಿಸಿದೆ, ಶಿವಕುಮಾರ್ ಅವರು ರಾಜಕೀಯ ಸಂತ್ರಸ್ತ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಬಿಂಬಿಸುತ್ತಿವೆ, ಇನ್ನೂ ಬಿಜೆಪಿ ಅಧಿಕಾರಕ್ಕೆ ಬರಲು ಸಮ್ಮಿಶ್ರ ಸರ್ಕಾರ ಕೆಡವಿದ್ದಕ್ಕೆ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತ ಪಡಿಸಿದೆ.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿತಾಲೂಕು ಒಕ್ಕಲಿಗರ ಸಂಘ ಹಾಗೂ ಡಿ.ಕೆ.ಶಿವಕುಮಾರ್‌ ಅಭಿಮಾನಿಗಳ ಬಳಗದ ಅಧ್ಯಕ್ಷ ಪುಟ್ಟಸ್ವಾಮಿಗೌಡ ಅವರ ನೇತೃತ್ವದಲ್ಲಿಸಮಾವೇಶಗೊಂಡ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಸ್ತೆತಡೆ ನಡೆಸಿ, ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿಪ್ರತಿಭಟನೆ ನೇತೃತ್ವ ವಹಿಸಿದ್ದ ಪುಟ್ಟಸ್ವಾಮಿಗೌಡ ಮಾತನಾಡಿ, ಪ್ರಧಾನಿ ನರೇಂದ್ರಮೋದಿ, ಅಮಿತ್‌ ಶಾ ಅವರು, ದ್ವೇಷದ ರಾಜಕಾರಣ ಮಾಡುತ್ತಿದ್ದು, ಇಡಿ ಮತ್ತು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಟ್ರಬಲ್‌ ಶೂಟರ್‌ ಎಂದೇ ಬಣ್ಣಿಸಲಾಗುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯ ಹಗೆತನದಿಂದಲೇ ಬಂಧಿಸುವಂತೆ ಮಾಡಲಾಗಿದೆ ಎಂದು ಆರೋಪಿಸಿದರು.

ಸೆಪ್ಟಂಬರ್ 7 ರಂದು ಮೈಸೂರು-ಚಾಮರಾಜನಗರ, ಹಾಸನ ಸೇರಿದಂತೆ ಹಲವು ಕಡೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ.

SCROLL FOR NEXT