ರಾಷ್ಟ್ರಪತಿಯಾಗಬೇಕಾದರೆ ಏನು ಮಾಡಬೇಕು?: ವಿದ್ಯಾರ್ಥಿ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರವೇನು ಗೊತ್ತಾ? 
ರಾಜ್ಯ

ರಾಷ್ಟ್ರಪತಿಯಾಗಬೇಕಾದರೆ ಏನು ಮಾಡಬೇಕು?: ವಿದ್ಯಾರ್ಥಿ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರ ಗೊತ್ತಾ?  

ಚಂದ್ರಯಾನ-2 ಹಿನ್ನಡೆಯಾದ ಹಿನ್ನಲೆಯಲ್ಲಿ ನಿರಾಶೆಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಳಿಕ ವಿದ್ಯಾರ್ಥಿಗಳೊಂದಿಗೆ ಚಟುಕು ಸಂವಾದ ನಡೆಸಿದ್ದಾರೆ. 

ಬೆಂಗಳೂರು: ಚಂದ್ರಯಾನ-2 ಹಿನ್ನಡೆಯಾದ ಹಿನ್ನಲೆಯಲ್ಲಿ ನಿರಾಶೆಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಳಿಕ ವಿದ್ಯಾರ್ಥಿಗಳೊಂದಿಗೆ ಚಟುಕು ಸಂವಾದ ನಡೆಸಿದ್ದಾರೆ. 

ಇಸ್ರೋ ಕಂಟ್ರೋಲ್ ಸೆಂಟರ್ ನಲ್ಲಿ ಇಸ್ರೋ ವಿಜ್ಞಾನಿಗಳನ್ನು ಕೊಂಡಾಡಿದ ಪ್ರಧಾನಿ ಮೋದಿಯವರು ಬಳಿಕ ಹೊರ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಚುಟುಕು ಸಂವಾದ ನಡೆಸಿದ್ದಾರೆ. ಹೊರ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ ಹಿಂದೆ ಆಗಿದ್ದನ್ನು ಮರೆತುಬಿಡಬೇಕು. ಮುಂದಿನ ಬಗ್ಗೆ ಚಿಂತಿಸಬೇಕೆಂದು ಕಿವಿಮಾತು ಹೇಳಿದರು. 

ಈ ವೇಳೆ ವಿದ್ಯಾರ್ಥಿಯೊಬ್ಬ ದೇಶದ ರಾಷ್ಟ್ರಪತಿಗಳಾಗಬೇಕಾದರೆ ಏನನ್ನು ಮಾಡಬೇಕು. ಯಾವ ರೀತಿ ತಯಾರಿ ನಡೆಸಬೇಕು ಎಂದು ಪ್ರಶ್ನೆ ಕೇಳಿದ್ದಾನೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಮೋದಿಯವರು, ರಾಷ್ಟ್ರಪತಿ ಏಕೆ? ಪ್ರಧಾನಮಂತ್ರಿ ಏಕಾಗಬಾರದು? ಎಂದು ಮರು ಪ್ರಶ್ನಿಸಿದ್ದಾರೆ. 

ಬಳಿಕ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿರುವ ಅವರು, ಜೀವನದಲ್ಲಿ ಗುರು ದೊಡ್ಡದಾಗಿರಬೇಕು. ಆ ಗುರಿಯನ್ನು ಚಿಕ್ಕ ಚಿಕ್ಕ ಭಾಗಗಳನ್ನಾಗಿ ಮಾಡಿಕೊಳ್ಳಬೇಕು. ಬಳಿ ಆ ಚಿಕ್ಕ ಚಿಕ್ಕ ಗುರಿಗಳನ್ನು ಸಾಧಿಸಲು ಮುಂದಾಗಬೇಕು. ಯಾವುದನ್ನು ಕಳೆದುಕೊಂಡಿದ್ದೀರೋ ಅದನ್ನು ಮರೆತುಬಿಡಿ. ಜೀವನದ ಮುಂದಿನ ಹಾದಿಗಳನ್ನೂ ನಿರಾಶೆಯಾಗೊಳ್ಳದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ