ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಯುವಕನ ಬಾಯಿಗೆ ಗುಂಡಿಕ್ಕಿ ಸಿನಿಮೀಯ ಶೈಲಿಯಲ್ಲಿ ಹತ್ಯೆ

ಸಿನಿಮೀಯ ಶೈಲಿಯಲ್ಲಿ ಯುವಕನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರ‍ಾಮದಲ್ಲಿ ಸೋಮವಾರ ಮಧ್ಯೆರಾತ್ರಿ ನಡೆದಿದೆ.

ಕಲಬುರಗಿ: ಸಿನಿಮೀಯ ಶೈಲಿಯಲ್ಲಿ ಯುವಕನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರ‍ಾಮದಲ್ಲಿ ಸೋಮವಾರ ಮಧ್ಯೆರಾತ್ರಿ ನಡೆದಿದೆ.

ಈ ಘಟನೆಗೆ ಹಳೇಯ ವೈಷಮ್ಯವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಕರಜಗಿ ಗ್ರಾಮದ 28 ವರ್ಷದ ಸೈಬಣ್ಣ ನೀಲಕಂಠ ತಳವಾರ (28) ಗುಂಡಿನ ದಾಳಿಗೆ ಬಲಿಯಾಗಿದ್ದು, ಅದೇ ಗ್ರಾಮದ ರವಿ ತಳವಾರ ಅಲಿಯಾಸ್ ಅಭಯ್ ಕೊಲೆ ಮಾಡಿದ ಆರೋಪಿ.

ಸೋಮವಾರ ಸಂಜೆ ಆರೋಪಿ ರವಿ, ಸೈಬಣ್ಣನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿದ್ದಾನೆ. ಪರಿಣಾಮ ಸೈಬಣ್ಣ ಗಂಭೀರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣವೇ ಆತನನ್ನು ಬೈಕ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿತ್ತು. ಹೀಗಾಗಿ ಜಿಲ್ಲಾಸ್ಪತ್ರಗೆ ರವಾನೆ ಮಾಡಲು ಮುಂದಾಗುತ್ತಿದ್ದಾಗ ಸೈಬಣ್ಣ ಸಾವನ್ನಪ್ಪಿದ್ದಾನೆ.

ತಕ್ಷಣವೇ ಸ್ಥಳೀಯರು ಆತನನ್ನು ಬೈಕ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕರೆದ್ಯೊಯುತ್ತಿದ್ದಾಗ ಮಾರ್ಗಮಧ್ಯೆದಲ್ಲಿಯೇ ಆತ ಮೃತಪಟ್ಟಿದ್ದಾನೆ.

ಹಳೆಯ ವೈಷಮ್ಯದಿಂದ ರವಿ ಸೈಬಣ್ಣನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಆರೋಪಿಯು ಈ ಹಿಂದೆ ಅಕ್ರಮ ಪಿಸ್ತೂಲ್ ಮಾರಾಟ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ ಎಂದು ತಿಳಿದು ಬಂದಿದೆ. ಘಟನಾ ಸ್ಥಕ್ಕೆ ಸಿಪಿಐ ಮಹಾಂತೇಶ್ ಪಾಟೀಲ, ಪಿಎಸ್‍ಐ ಮಂಜುನಾಥ ಹೂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!