ನಾರಾಯಣ ಗೌಡ 
ರಾಜ್ಯ

ಡಿ.ಕೆ. ಶಿವಕುಮಾರ್‌ ಬಂಧನ ರಾಜಕೀಯವಾಗಿ ತುಳಿಯುವ ಹುನ್ನಾರ: ಕರ್ನಾಟಕ ರಕ್ಷಣಾ ವೇದಿಕೆ

ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ‌ಕುತಂತ್ರ ಮಾಡಿ‌ ಬಂಧಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ‌ಕುತಂತ್ರ ಮಾಡಿ‌ ಬಂಧಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದರೂ ಅನಗತ್ಯವಾಗಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿರುವುದು ಸ್ಪಷ್ಟ. ‌ಇಂದು ನಡೆಯುವ ಹೋರಾಟದಲ್ಲಿ ಸಮುದಾಯದ ನಾಯಕನಾಗಿ ನಾನು ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಇಂದು ಒಕ್ಕಲಿಗರ ಸಂಘ, ಕಾಂಗ್ರೆಸ್ ,ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಹಾಗಾಗಿ, ಒಬ್ಬ ಸಮುದಾಯದ ಮುಖಂಡನಾಗಿ ಭಾಗವಹಿಸುತ್ತಿದ್ದೇನೆ. ಆದರೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಈ ಹೋರಾಟಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!