ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳ ಜೊತೆ ಮನೆಬಿಟ್ಟು ಹೋದ ಪತ್ನಿ: ಮನನೊಂದ ಆಟೋ ಚಾಲಕ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದಾಗಿ ಮಕ್ಕಳ ಜೊತೆ ಪತ್ನಿ ಮನೆಬಿಟ್ಟು ಹೋದ ಕಾರಣ ನೊಂದ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಮಕ್ಕಳ ಜೊತೆ ಪತ್ನಿ ಮನೆಬಿಟ್ಟು ಹೋದ ಕಾರಣ ನೊಂದ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಾಲ್ಮೀಕಿ ನಗರದ ನಿವಾಸಿ ರಾಮಾಂಜನೇಯ ಮೃತ ದುರ್ದೈವಿ. ಈತನ ಪತ್ನಿ ಭವ್ಯ ತನ್ನ ಇಬ್ಬರು ಮಕ್ಕಳ ಜೊತೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಮಾಂಜನೇಯ ಅವರ ತಾಯಿ ರಂಗಮ್ಮ ಮನೆಗೆ ಬಂದು ಹಲವು ಬಾರಿ ಬಾಗಿಲು ತಟ್ಟಿದ್ದಾರೆ, ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ  ಬಾರದಿದ್ದಾಗ ಅಕ್ಕಪಕ್ಕದವರನ್ನು ಕರೆದು ಬಾಗಿಲು ಮುರಿಸಿದ್ದಾರೆ. ಒಳಗೆ ಬಂದಾಗ ಪ್ಯಾನಿಗೆ ನೇಣು ಹಾಕಿಕೊಂಡಿರುವುದು ತಿಳಿದು ಬಂದಿದೆ.

ದಂಪತಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು ಇತ್ತೀಚೆಗಷ್ಟೆ ನೆಲಮಂಗಲಕ್ಕೆ ಶಿಫ್ಟ್ ಆಗಿದ್ದರು, ಆದರೆ ನೆಲಮಂಗಲಕ್ಕೆ ಶಿಫ್ಟ್ ಆಗಿದ್ದು ಭವ್ಯಗೆ ಇಷ್ಟವಿರಲಿಲ್ಲ, ಹೀಗಾಗಿ ಪ್ರತಿದಿನ ಪತಿ ಜೊತೆ ಜಗಳ ಮಾಡುತ್ತಿದ್ದಳು. ತನ್ನ ಪತ್ನಿ ಒಂದು ಮಾತು ಹೇಳದೇ ಹೋಗಿದ್ದಕ್ಕಾಗಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.

ತನ್ನ ಪತ್ನಿಗೆ ಕರೆ ಮಾಡಿ ಹಲವು ಬಾರಿ ಆಕೆಯ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಆಕೆ ಯಾವುದಕ್ಕ ಪ್ರತಿಕ್ರಿಯೆ ನೀಡಲಿಲ್ಲ,ಹೀಗಾಗಿ ಸಾವಿಗೆ ಶರಣಾಗಿದ್ದಾನೆ. ತಾಯಿ ರಂಗಮ್ಮ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT