ರಾಜ್ಯ

ಕಾಶ್ಮೀರದಲ್ಲಿ ಸಂಪರ್ಕ ಸಾಧನಗಳ ಪುನರ್ ಸ್ಥಾಪನೆಗೆ ಆದೇಶ ನೀಡಲು ಹೈಕೋರ್ಟ್ ನಕಾರ

Lingaraj Badiger

ಬೆಂಗಳೂರು: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಗಿತಗೊಳಿಸಲಾಗಿರುವ ಅಂತರ್ಜಾಲ ಹಾಗೂ ಸಂಪರ್ಕ ಸೇವೆಗಳನ್ನು ಮರು ಸ್ಥಾಪಿಸಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಯಾವುದೇ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.

ನಗರದ ಅಜೀಂ ಪ್ರೇಮ್ ಜಿ ವಿವಿಯಲ್ಲಿ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ಕಾಶ್ಮೀರದ ಸೈಯದ್‌ ಪೀರ್‌ಜಾದಾ ಸುಹೇಲ್‌ ಅಹಮದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಬಾಕಿಯಿರುವುದರಿಂದ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ಎಲ್ಲಾ ಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದು ಅಸಾಂವಿಧಾನಿಕ ಕ್ರಮ. ಇದರಿಂದ ಜನರ ಮೂಲಭೂತ ಹಕ್ಕುಗಳಿಗೆ ಚ್ಯುತಿಯಾಗಿದೆ. ಪರಿಸ್ಥಿತಿ ಶಾಂತವಾಗಿದ್ದರೂ, ಮೊಬೈಲ್, ಅಂತರ್ಜಾಲದಂತಹ ಸಂಪರ್ಕ ಸಾಧನಗಳನ್ನು ಬಳಸಲು ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

SCROLL FOR NEXT