ರಾಜ್ಯ

ಮಹದಾಯಿ ಯೋಜನೆ; ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಾಯುತ್ತಿರುವ ಕರ್ನಾಟಕ 

Sumana Upadhyaya

ಬೆಳಗಾವಿ; ಕರ್ನಾಟಕ ಭಾಗದ 13.42 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕಳೆದ ವರ್ಷ ಆಗಸ್ಟ್ 14ರಂದು ಮಹದಾಯಿ ನೀರು ಹಂಚಿಕೆ ವಿವಾದ ನ್ಯಾಯಮಂಡಳಿ(ಎಂಡಬ್ಲ್ಯುಡಿಟಿ) ತೀರ್ಪು ನೀಡಿದ್ದರೂ ಕೂಡ ಕೇಂದ್ರ ಸರ್ಕಾರ ಕರ್ನಾಟಕ-ಗೋವಾ ಗಡಿಯಲ್ಲಿ ಮಹದಾಯಿ ಯೋಜನೆ ಆರಂಭಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ.

ಯೋಜನೆಯಡಿ ತನ್ನ ಪಾಲಿನ ನೀರನ್ನು ಹೆಚ್ಚು ಬಿಡುಗಡೆ ಮಾಡುವಂತೆ ಕರ್ನಾಟಕ ಮತ್ತು ಗೋವಾ ಸರ್ಕಾರಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದರಿಂದ ಕೇಂದ್ರ ಸರ್ಕಾರ ಯೋಜನೆಗೆ ಸದ್ಯ ತಡೆ ನೀಡಿದೆ.


ಕಳೆದ ವರ್ಷ ಎಂಡಬ್ಲ್ಯುಡಿಟಿ ನೀಡಿದ್ದ ಅಂತಿಮ ತೀರ್ಪಿನಲ್ಲಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು, ಗೋವಾಕ್ಕೆ 24 ಟಿಎಂಸಿ ಮತ್ತು ಮಹಾರಾಷ್ಟ್ರಕ್ಕೆ 1.33 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಆದರೆ ತಮಗೆ ಸಿಕ್ಕಿರುವ ನೀರು ಕಡಿಮೆಯಾಗಿದೆ ಎಂದು ಹೇಳಿ ಕರ್ನಾಟಕ ಮತ್ತು ಗೋವಾ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.


ಕೂಡಲೇ ಅಧಿಸೂಚನೆ ಹೊರಡಿಸಿ ಕರ್ನಾಟಕಕ್ಕೆ ಯೋಜನೆ ಮುಂದುವರಿಸಲು ಅವಕಾಶ ಮಾಡಿಕೊಡಬೇಕೆಂದು ಉತ್ತರ ಕರ್ನಾಟಕದ ಹಲವು ನಾಯಕರು ಒತ್ತಾಯಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ವಿರುದ್ಧವಾಗಿದ್ದು ಕರ್ನಾಟಕ ಮತ್ತು ಗೋವಾ ರಾಜ್ಯಗಳು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಕೇಸನ್ನು ಹಿಂತೆಗೆದುಕೊಳ್ಳಬೇಕೆಂದು ಬಯಸಿದೆ. ಸುಪ್ರೀಂ ಕೋರ್ಟ್ ನಲ್ಲಿ ಕೇಸು ಮುಗಿಯುವವರೆಗೆ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

SCROLL FOR NEXT