ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ 
ರಾಜ್ಯ

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ 

ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿದು ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿದು ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಸವರಾಜ್ ವಿರೇಶ್ ಶಿವುರ (21) ಎಂದು ಗುರುತಿಸಲಾಗಿದೆ.ಕೃತ್ಯ ನಡೆದ ತಕ್ಷಣವೇ ವಿದ್ಯಾರ್ಥಿಯನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸ್ದ್ದರೂ  ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದವನಾಗಿರುವ ಬಸವರಾಜ್ ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದನು.

ಗುರುವಾರ ಗಣೇಶ್ ವಿಸರ್ಜನೆ ಮೆರವಣಿಗೆ ನೋಡಲು ಸ್ನೇಹಿತರೊಡನೆ ಆಗಮಿಸಿದ್ದ ಬಸವರಾಜ್ ಹರ್ಷ ಕಾಂಪ್ಲೆಕ್ಸ್ ಬಳಿ ಇದ್ದಾಗ ಗಲಾಟೆ ನಡೆದು ದುಷ್ಕರ್ಮಿಗಳು ಬಸವರಾಜ್ ಗೆ ಚಾಕುವಿನಿಂದ ಇರಿದಿದ್ದಾರೆ. ಗಂಭೀರ ಗಾಯವಾಗಿದ್ದ ಬಸವರಾಜ್ ನನ್ನು ಕಿಮ್ಸ್ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಿಲ್ಲ. 

ಇನ್ನು ಘಟನೆಯಲ್ಲಿ ಇನ್ನೂ ಐವರಿಗೆ ಗಾಯಗಳಾಗಿದ್ದು ಅವರಿಗೆ ಸಹ ಚಿಕಿತ್ಸೆ ಒದಗಿಸಲಾಗುತ್ತಿದೆ.ಒಟ್ಟಾರೆ ಐದು ಕಡೆ ಚಾಕು ಇರಿತ ಘಟನೆ ನಡೆದಿದೆ. ಹರ್ಷ ಕಾಂಪ್ಲೆಕ್ಸ್, ದುರ್ಗದ ಬೈಲ್, ಸಂಗೊಳ್ಳಿ ರಾಯಣ್ಣ ವೃತ್ತ, ಹಳೆ ಹುಬ್ಬಳ್ಳಿಗಳಲ್ಲಿ ಚಾಕು ಇರಿತದ ಘಟನೆಗಳು ವರದಿಯಾಗಿದೆ. ಘಟನೆ ಕುರಿತಂತೆ ಶಹರ್​ ಉಪನಗರ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT