ರಾಜ್ಯ

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ: 'ಪೋಷಣ್ ಅಭಿಯಾನ್' ಅನುಷ್ಠಾನ ಕುರಿತು ಸಿಎಂ ಜತೆ ಚರ್ಚೆ

Raghavendra Adiga

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಸ್ಥ ಭಾರತ ನಿರ್ಮಾಣ ಕನಸಿನ ಭಾಗವಾಗಿರುವ 'ಪೋಷಣ್ ಅಭಿಯಾನ್ ಯೋಜನೆ'  ಸಂಬಂಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಿದರು

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಪ್ರಗತಿಪರಿಶೀಲನೆ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮಹತ್ವಾಕಾಂಕ್ಷಿಯ ಪೋಷಣ್ ಅಭಿಯಾನ್ ಯಶಸ್ಸಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೆಚ್ಚಿನ ಶ‍್ರಮವಹಿಸಬೇಕೆಂದು ಸಲಹೆ ನೀಡಿದರು.

ಮಕ್ಕಳು, ಮಹಿಳೆಯರು ಹಾಗೂ ವಿಶೇಷವಾಗಿ ಗರ್ಭಿಣಿಯರಲ್ಲಿ ಅಪೌಷ್ಠಿಕತೆ ತಡೆಗಟ್ಟುವ ಯೋಜನೆ ಇದಾಗಿದ್ದು, ಯೋಜನೆಯ ಸಮರ್ಪಕ ಜಾರಿಗೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರ ಅಗತ್ಯ. ಜೊತೆಗೆ ಸಂಘಸಂಸ್ಥೆಗಳು ಇದಕ್ಕೆ ಕೈ ಜೋಡಿಸಬೇಕು. ಯೋಜನೆಯ ಯಶಸ್ಸಿಗೆ ಅಧಿಕಾರಿಗಳು ಕಟಿಬದ್ಧರಾಗಬೇಕು ಎಂದರು. 

ಅಭಿಯಾನ ಯಶಸ್ಸಿಗೆ  ಕೇಂದ್ರ  ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಯಡಿಯೂರಪ್ಪ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ವಿವರಣೆ ನೀಡಿದ ಅವರು, ರಾಜ್ಯದಲ್ಲಿ ಯೋಜನೆ ಜಾರಿಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಸ್ತಾಪಿಸಿದರು.

ಯಡಿಯೂರಪ್ಪ ಮಾತನಾಡಿ, ಪ್ರಧಾನ ಮಂತ್ರಿಗಳ ಸ್ವಸ್ಥ ಭಾರತ ನಿರ್ಮಾಣದ ಕನಸು ನನಸಾಗುವ ಕಾರ್ಯಕ್ರಮ ಇದಾಗಿದ್ದು, ಯೋಜನೆಯ ಜಾರಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಪೋಷಣ್ ಅಭಿಯಾನ್ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು. ಈ ಸಂಬಂಧ ಆದಷ್ಟು ಬೇಗ ಅಧಿಕಾರಿಗಳ ಜೊತೆ ಸಭೆ ನಡೆಸಿ, ಉತ್ತಮ ಫಲಿತಾಂಶ ನೀಡುವಂತೆ ಸೂಚಿಸಲಾಗುವುದು ಎಂದು ಕೇಂದ್ರ ಸಚಿವರಿಗೆ ಭರವಸೆ ನೀಡಿದರು.

ಯುಎನ್‍ಐ ಯುಎಲ್ ಎಸ್‍ಎಂಆರ್ ವಿಎನ್ 1505ಈಗಾಗಲೇ ರಾಜ್ಯ ಸರ್ಕಾರ 19 ಜಿಲ್ಲೆಗಳಲ್ಲಿ ಪೋಷಣ ಅಭಿಯಾನಕ್ಕೆ  ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು ಮುಂದಿನ ದಿನಗಳಲ್ಲಿ ಉಳಿದಿರುವ 11 ಜಿಲ್ಲೆಗಳಲ್ಲೂ  ಇದನ್ನು ಜಾರಿಗೆ ತರುತ್ತೇವೆ. ಆದಷ್ಟು ಬೇಗ ಅಧಿಕಾರಿಗಳ ಜೊತೆ ಒಂದು ಸಭೆ ನಡೆಸಿ ಪೋಷಣ  ಅಭಿಯಾನ ರಾಜ್ಯದಲ್ಲಿ ಫಲಿತಾಂಶ ತರುವಂತಹ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ  ನೀಡುತ್ತೇನೆ ಅಂತ ಮಾನ್ಯ ಕೇಂದ್ರ ಮಂತ್ರಿಗಳಿಗೆ ಭರವಸೆ ನೀಡಿದರು.

SCROLL FOR NEXT