ಸುರೇಶ್ ಕುಮಾರ್ 
ರಾಜ್ಯ

ಕನ್ನಡದಂತೆ ಹಿಂದಿಗೂ ಮಹತ್ವ ನೀಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್  

ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ: ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಲ್ಲಿನ‌ ನಂದಿಭವನದಲ್ಲಿ ನಡೆದ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ 6ನೇ ರಾಜ್ಯಮಟ್ಟದ ಹಿಂದಿ ಶೈಕ್ಷಣಿಕ ಸಮಾರಂಭ ಮತ್ತು ಹಿಂದಿ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಸುರೇಶ್ ಕುಮಾರ್ ಮಾತನಾಡಿದರು.

ಮಾಜಿ ಪ್ರಧಾನಿ ದಿ.ಅಟಲ್‌ಬಿಹಾರಿ ವಾಜಪೇಯಿ ಅವರಿಗೆ ಹಿಂದಿ ಭಾಷೆ ಸಾಹಿತ್ಯದಲ್ಲಿ ಒಳ್ಳೆಯ ಪಾಂಡಿತ್ಯ ಇತ್ತು. ವಾಜಪೇಯಿ ಅವರಿಂದ ಸ್ಫೂರ್ತಿ ಪಡೆದು ಹಿಂದಿ ಕಲಿತಿದ್ದೇವೆ. ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಅವರು. ಹೀಗಾಗಿ ರಾಜ್ಯದಲ್ಲಿ  ನಮ್ಮ ಮಾತೃಭಾಷೆ ಕನ್ನಡಕ್ಕೆ ನೀಡಿರುವ ಪ್ರಾಮುಖ್ಯತೆಯಂತೆಯೇ ಹಿಂದಿ ಭಾಷೆ ಕಲಿಕೆಗೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು. 

ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರ ಆದಷ್ಟು ಬೇಗ ಪರಿಹರಿಸುವ ಕೆಲಸ ಮಾಡಲಿದೆ ಎಂದು ಸುರೇಶ್ ಕುಮಾರ್ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!