ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ?: ಹೆಚ್ ಡಿ ಕುಮಾರಸ್ವಾಮಿ 

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.


ಇದೀಗ ಇಂದು ಮತ್ತೆ ಅಂತಹದ್ದೇ ಆರೋಪವನ್ನು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ವಿರುದ್ಧ ಮಾಡಿದ್ದಾರೆ. ಇಂದು ದೇಶಾದ್ಯಂತ ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಿಸುತ್ತಿದೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡವೂ ಭಾಗವಾಗಿರುವುದರಿಂದ ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ ಎಂದು ಪ್ರಶ್ನೆ ಮಾಡಿದ್ದಾರೆ. 


ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT