ಸಂಗ್ರಹ ಚಿತ್ರ 
ರಾಜ್ಯ

ಹಿಂದಿ ರಾಷ್ಟ್ರಭಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ: ಸಿದ್ದರಾಮಯ್ಯ

ಹಿಂದಿ ರಾಷ್ಟ್ರಭಾಷೆ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದ ರಾಮಯ್ಯ ಹಾಗೂ ಎಚ್‌ ಡಿ ಕುಮಾರ ಸ್ವಾಮಿ ವಿರೊಧಿಸಿದ್ದಾರೆ.

ಬೆಂಗಳೂರು: ಹಿಂದಿ ರಾಷ್ಟ್ರಭಾಷೆ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದ ರಾಮಯ್ಯ ಹಾಗೂ ಎಚ್‌ ಡಿ ಕುಮಾರ ಸ್ವಾಮಿ ವಿರೊಧಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ, " ಹಿಂದಿ ರಾಷ್ಟ್ರ ಭಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ. ಅದು ಕನ್ನಡದಂತೆಯೇ 22 ಅಧಿಕೃತ ಭಾಷೆಗಳಲ್ಲಿ ಒಂದು ಎನ್ನುವುದು ತಿಳಿದಿರಲಿ. ಸುಳ್ಳು-ತಪ್ಪುಮಾಹಿತಿ ಮೂಲಕ ಭಾಷೆಯನ್ನು ಬೆಳೆಸಲಾಗದು. ಭಾಷೆ ಪರಸ್ಪರ ಪ್ರೀತಿ ಮತ್ತು ಕೊಡು-ಕೊಳ್ಳುವಿಕೆಯಿಂದ ಬೆಳೆಯುತ್ತದೆ" ಎಂದು ಹೇಳಿದ್ದಾರೆ. 

ಇದೇ ವಿಷಯಕ್ಕೆ ಸಿದ್ದರಾಮಯ್ಯ ಅವರ ಕೈ ಜೋಡಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿ, "ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ" ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

"ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಈ ಹಿಂದೆ ಇದ್ದ ನಿಯಮವನ್ನು ವಾಪಾಸ್ ತರಲಾಗಿಲ್ಲ.  ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾ-ಖಂಡಿತವಾಗಿ ವಿರೋಧಿಸುತ್ತೇನೆ" ಎಂದು ಶುಕ್ರವಾರವೂ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT