ಬಿ.ಎಸ್ ಯಡಿಯೂರಪ್ಪ 
ರಾಜ್ಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ ಘೋಷಣೆ

ಹೈದರಾಬಾದ್ ಕರ್ನಾಟಕ ಪ್ರದೇಶವನ್ನು 'ಕಲ್ಯಾಣ ಕರ್ನಾಟಕ ಪ್ರದೇಶವೆಂದು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಕಲಬುರಗಿ: ಹೈದರಾಬಾದ್ ಕರ್ನಾಟಕ ಪ್ರದೇಶವನ್ನು 'ಕಲ್ಯಾಣ ಕರ್ನಾಟಕ ಪ್ರದೇಶವೆಂದು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ಇಂದು ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ. ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಹಣಕಾಸಿನ ತೊಂದರೆ ಆಗಿರುವುದರಿಂದ ಮುಂದಿನ ವರ್ಷದ ಆಯವ್ಯಯದಲ್ಲಿ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬದ್ಧನಾಗಿದ್ದೇನೆ ಎಂದರು.

ಹೈದರಾಬಾದ್ ಕರ್ನಾಟಕ ಭಾಗದವರಿಗೆ ಹೆಚ್ಚಿನ ಸಚಿವ ಸ್ಥಾನ ನೀಡುವ ಕುರಿತಂತೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಮೂಲಕ ಹಿಂದುಳಿದ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು.

ಈ ಭಾಗದ ಜನರ ಆಶೋತ್ತರಗಳಿಗೆ ನಮ್ಮ ಸರ್ಕಾರ ಸ್ಪಂದಿಸಲಿದೆ. ಕೇವಲ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾವಣೆ ಮಾಡಿದರೆ ಏನೂ ಉಪಯೋಗವಿಲ್ಲ. ಇದಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ವಿಶೇಷ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಬಾರಿ ಪ್ರವಾಹ ಉಂಟಾಗಿರುವುದರಿಂದ ಹೆಚ್ಚಿನ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ. ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಿ, ಹಿಂದುಳಿದ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಾದೇಶಿಕ ಆಯುಕ್ತ ಹಾಗೂ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್ ಯಾದವ್ ಬರಮಾಡಿಕೊಂಡರು. ಶಾಸಕರಾದ ರಾಜು ಗೌಡ, ಎನ್. ರವಿಕುಮಾರ್, ಯೋಜನಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತಕ್ಕೆ ಆಗಮಿಸಿದ ಬಿಜೆಪಿ ಮುಖಂಡರನ್ನು ವಿಮಾನ ನಿಲ್ದಾಣದ ಒಳಗಡೆ ಬಿಡದೇ ಇರುವುದಕ್ಕೆ ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಮತ್ತು ಮುಖಂಡರ ನಡುವೆ ವಾಗ್ವಾದ ನಡೆಯಿತು. ಇದೇ‌ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್ ವೃಂದದಿಂದ ಮುಖ್ಯಮಂತ್ರಿ ಅವರಿಗೆ ಗಾರ್ಡ್ ಆಫ್ ಹಾನರ್ ಸಲ್ಲಿಸಲಾಯಿತು.

ಕಲಬುರಗಿ ಭೇಟಿಯ ವೇಳೆ ಮುಖ್ಯಮಂತ್ರಿಯವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಪೀಠ ಉದ್ಘಾಟಿಸಲಿದ್ದಾರೆ. ಬಳಿಕ ಕಲಬುರಗಿಯ ಸುಲಫಲ ಮಠದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಸವ ಭವನ ಮತ್ತು ಶ್ರೀ ಶರಣ ಬಸವೇಶ್ವರ ಅಧ್ಯಯನ ಪೀಠವನ್ನು ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT