ಯುಕೋ ಬ್ಯಾಂಕ್ ನಲ್ಲಿ ಭಾರೀ ಅಗ್ನಿ ಅವಗಢ 
ರಾಜ್ಯ

ಬೆಂಗಳೂರು: ಯುಕೋ ಬ್ಯಾಂಕ್ ನಲ್ಲಿ ಭಾರೀ ಅಗ್ನಿ ಅವಗಢ, ತೀವ್ರಗೊಂಡ ರಕ್ಷಣಾ ಕಾರ್ಯ

ನಗರದ ಎಂ ಜಿ ರಸ್ತೆಯಲ್ಲಿರುವ ಯೂಕೋ ಬ್ಯಾಂಕ್ ನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 

ಬೆಂಗಳೂರು ನಗರದ ಎಂ ಜಿ ರಸ್ತೆಯಲ್ಲಿರುವ ಯೂಕೋ ಬ್ಯಾಂಕ್ ನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 

ಮಧ್ಯಾಹ್ನ 2.30ರ ಸುಮಾರಿಗೆ ಯುಕೋ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಭಾರಿ ಅಗ್ನಿ ಕಾಣಿಸಿಕೊಂಡ ಪರಿಣಾಮ ಸಿಬ್ಬಂದಿ ಹಾಗೂ ನಾಗರಿಕರು ಭಯಭೀತಗೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. 

ಈಗಾಗಲೇ ಸ್ಥಳಕ್ಕೆ 5 ಅಗ್ನಿ ಶಾಮಕ ವಾಹನಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎರಡನೇ ಮಹಡಿಯಲ್ಲಿದ್ದ ಜನರು ಭಯಬೀತರಾಗಿ ಹೊರಗೆ ಓಡಿ ಬಂದಿದ್ದಾರೆ. ಮೂರನೇ ಹಾಗೂ ನಾಲ್ಕನೇ ಮಹಡಿಯಲ್ಲಿದ್ದ ಸಿಬ್ಬಂದಿ ಹಾಗೂ ಜನರು ಕಟ್ಟಡದ ತಾರಸಿಗೆ ದೌಡಾಯಿಸಿ, ರಕ್ಷಣೆಗೆ ಮೊರೆ ಇಟ್ಟಿದ್ದಾರೆ.

ಸದ್ಯ ಅಗ್ನಿ ಶಾಮಕ ಸಿಬ್ಬಂದಿ, ಹಲಸೂರು ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT