ಸಾಂದರ್ಭಿಕ ಚಿತ್ರಗಳು 
ರಾಜ್ಯ

ಫೋಟೋ ಹಂಚಿಕೊಂಡ ಪ್ರಿಯತಮ, ಮನನೊಂದು ಪ್ರೇಯಸಿ ಆತ್ಮಹತ್ಯೆ

ಪ್ರೇಮಿಯೊಬ್ಬ ತನ್ನ ಪ್ರೇಯಸಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪರಿಣಾಮ ಮನನೊಂದ ಪ್ರೇಯಸಿ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ : ಪ್ರೇಮಿಯೊಬ್ಬ ತನ್ನ ಪ್ರೇಯಸಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪರಿಣಾಮ ಮನನೊಂದ ಪ್ರೇಯಸಿ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಬೂದಿಹಾಳದ ಪಿ.ಎಚ್. ಗ್ರಾಮದ 23 ವರ್ಷದ ಸುಧಾರಾಣಿ ಬಿರಾದಾರ, ಸೀಮೆ ಎಣ್ಣೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಿಯುಸಿಯಿಂದ ಸುಧಾರಾಣಿ ಹಾಗೂ ಕೆರೂಟಗಿ ಗ್ರಾಮದ ಶಿವಾನಂದ ನಡುವೆ ಪರಿಚಯವಾಗಿತ್ತು. ನಂತರ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ, ಅನೇಕ ಫೋಟೋ ಕ್ಲಿಕಿಸಿಕೊಂಡಿದ್ದರು. ಕೆಲವು ದಿನಗಳ ನಂತರ, ಸುಧಾರಾಣಿ ಶಿವಾನಂದ ಬಿರಾದಾರನನ್ನು ಮದುವೆಯಾಗಲು ನಿರಾಕರಿಸಿದಳು. ಇದರಿಂದ ಆಕ್ರೋಶಗೊಂಡ ಶಿವಾನಂದ, ಸುಧಾರಾಣಿ ಜೊತೆ ತೆಗೆಸಿಕೊಂಡಿದ್ದ ಸೆಲ್ಫೀ  ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಅಪಲೋಡ್‌ ಮಾಡಿದ್ದ.

ಇದನ್ನು ನೋಡಿದ ಸುಧಾರಾಣಿ ತನ್ನ ಪ್ರೀತಿಯ ವಿಚಾರ ಎಲ್ಲೆಡೆ ಪ್ರಚಾರವಾಯಿತು ಎಂದು ಮನನೊಂದು ಸೆ.17ರಂದು ಸೀಮೆ ಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆಕೆಯನ್ನು ತಕ್ಷಣವೇ ಸಿಂದಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಯುವತಿ ಕೊನೆಯುಸಿರೆಳೆದಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ನೀಲಮ್ಮ ನೀಲಕಂಟ ಬಿರಾದಾರ, ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT